Tuesday, July 8, 2025
Homeಅಂತಾರಾಷ್ಟ್ರೀಯ | Internationalಭಯೋತ್ಪಾದನೆಯೊಂದಿಗೆ ಶಾಂತಿ, ಸಮೃದ್ಧಿ ಸಹಬಾಳ್ವೆ ನಡೆಸಲು ಸಾಧ್ಯವಿಲ್ಲ : ರಾಜನಾಥ್ ಸಿಂಗ್

ಭಯೋತ್ಪಾದನೆಯೊಂದಿಗೆ ಶಾಂತಿ, ಸಮೃದ್ಧಿ ಸಹಬಾಳ್ವೆ ನಡೆಸಲು ಸಾಧ್ಯವಿಲ್ಲ : ರಾಜನಾಥ್ ಸಿಂಗ್

ಕ್ವಿಂಗ್ಲಾವೊ.ಜೂ.26-ಭಯೋತ್ಪಾದನೆಗೆ ಹಣಕಾಸು ಒದಗಿಸುವವರು ಮತ್ತು ಪ್ರಾಯೋಜಕರನ್ನು ಹೊಣೆಗಾರರನ್ನಾಗಿ ಮಾಡಬೇಕು ಮತ್ತು ಭಯೋತ್ಪಾದನೆಯೊಂದಿಗೆ ಶಾಂತಿ, ಸಮೃದ್ಧಿ ಸಹಬಾಳ್ವೆ ನಡೆಸಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಚೀನಾ ಪ್ರವಾಸದಲ್ಲಿರುವ ಅವರು ಇಂದು ಶಾಂಫೈ ಸಹಕಾರ ಸಂಸ್ಥೆ ಹಮ್ಮಿಕೊಂಡಿದ್ದ ರಕ್ಷಣಾ ಸಚಿವರ ಸಮಾವೇಶದಲ್ಲಿ ಮಾತನಾಡಿದ ಅವರು ಕೆಲವು ದೇಶಗಳು ಭಯೋತ್ಪಾದಕರಿಗೆ ಆಶ್ರಯ ನೀಡಲು ಗಡಿಯಾಚೆಗಿನ ಭಯೋತ್ಪಾದನೆಯನ್ನು ನೀತಿಯ ಸಾಧನವಾಗಿ ಬಳಸುತ್ತಿವೆ ಎಂದು ಹೇಳಿದರು.

ಭಯೋತ್ಪಾದನೆ ಬೆದರಿಕೆಯನ್ನು ಎದುರಿಸುವಲ್ಲಿ ಮಾನದಂಡಗಳು ಇರಬಾರದು ಎಂದು ಪಾಕಿಸ್ತಾನವನ್ನು ಕಟುವಾಗಿ ಟೀಕಿಸಿದರು.ನಮ್ಮ ದೇಶದಲ್ಲಿ ನಾವು ಎದುರಿಸುತ್ತಿರುವ ದೊಡ್ಡ ಸವಾಲುಗಳು ಶಾಂತಿ, ಭದ್ರತೆ ಮತ್ತು ವಿಶ್ವಾಸ ಕೊರತೆಗೆ ಸಂಬಂಧಿಸಿವೆ ಎಂದು ಅವರು ಹೇಳಿದರು.

ಮತ್ತು ಈ ಸಮಸ್ಯೆಗಳಿಗೆ ಮೂಲ ಕಾರಣ ಹೆಚ್ಚುತ್ತಿರುವ ಮೂಲಭೂತೀಕರಣ, ಉಗ್ರವಾದ ಮತ್ತು ಭಯೋತ್ಪಾದನೆ ಎಂದು ಹೇಳದರು.ಶಾಂತಿ ಮತ್ತು ಸಮೃದ್ಧಿಯು ಭಯೋತ್ಪಾದನೆ ಮತ್ತು ರಾಜೈತರ ನಟರು ಮತ್ತು ಭಯೋತ್ಪಾದಕ ಗುಂಪುಗಳ ಕೈಯಲ್ಲಿರುವ ಸಾಮೂಹಿಕ ವಿನಾಶದ ಶಸ್ತ್ರಾಸ್ತ್ರಗಳಪ್ರಸರಣದೊಂದಿಗೆ ಸಹಬಾಳ್ವೆ ನಡೆಸಲು ಸಾಧ್ಯವಿಲ್ಲ ಎಂದು ಸಿಂಗ್ ಹೇಳಿದರು.

ಈ ಸವಾಲುಗಳನ್ನು ಎದುರಿಸಲು ನಿರ್ಣಾಯಕ ಕ್ರಮದ ಅಗತ್ಯವಿದೆ, ಮತ್ತು ನಮ್ಮ ಸಾಮೂಹಿಕ ಸುರಕ್ಷತೆ ಮತ್ತು ಭದ್ರತೆಗಾಗಿ ಈ ದುಷ್ಟಶಕ್ತಿಗಳ ವಿರುದ್ಧದ ಹೋರಾಟದಲ್ಲಿ ನಾವು ಒಂದಾಗಬೇಕು ಎಂದು ಅವರು ಹೇಳಿದರು.ಭಯೋತ್ಪಾದನೆಯನ್ನು ಪ್ರಾಯೋಜಿಸುವವರು, ಪೋಷಿಸುವವರು ಮತ್ತು ತಮ್ಮ ಸಂಕುಚಿತ ಮತ್ತು ಸ್ವಾರ್ಥಿ ಉದ್ದೇಶಗಳಿಗಾಗಿ ಬಳಸಿಕೊಳ್ಳುವವರು ಉಗ್ರ ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ ಎಂದು ರಕ್ಷಣಾ ಸಚಿವರು ಹೇಳಿದರು.

ಭಯೋತ್ಪಾದನೆಯನ್ನು ಎದುರಿಸುವಲ್ಲಿ ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ ಈ ಬೆದರಿಕೆಯನ್ನು ಎದುರಿಸುವಲ್ಲಿ ದ್ವಿಮುಖ ನೀತಿಗಳಲ್ಲಿ ತೊಡಗಿರುವ ರಾಷ್ಟ್ರಗಳನ್ನು ಟೀಕಿಸಲು ಹಿಂಜರಿಯಬಾರದು ಎಂದು ಅವರು ಹೇಳಿದರು.

ಪಹಲ್ಟಾಮ್ ಭಯೋತ್ಪಾದಕ ದಾಳಿಯ ಮಾದರಿಯು ಭಾರತದಲ್ಲಿ ಲಷ್ಕರ್-ಎ-ತೈಬಾದ ಹಿಂದಿನ ಭಯೋತ್ಪಾದಕ ದಾಳಿಗಳಿಗೆ ಹೊಂದಿಕೆಯಾಗುತ್ತದೆ ಎಂದು ಸಿಂಗ್ ಹೇಳಿದರು.ಭಾರತ ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸುತ್ತಿದೆ ಎಂದು ಅವರು ಹೇಳಿದರು. ಅಫ್ಘಾನಿಸ್ತಾನದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಬೆಂಬಲಿಸುವ ತನ್ನ ನೀತಿಯಲ್ಲಿ ಭಾರತ ಸ್ಥಿರ ಮತ್ತು ದೃಢವಾಗಿದೆ ಎಂದು ರಕ್ಷಣಾ ಸಚಿವರು ಒತ್ತಿ ಹೇಳಿದರು.

RELATED ARTICLES

Latest News