ಪ್ರವೀಣ್‍ ಹತ್ಯೆಯಲ್ಲಿ SDPI,PFI ಭಾಗಿ ಶಂಕೆ..!?

Social Share

ಬೆಂಗಳೂರು,ಜು.28- ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‍ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್‍ಐ ಮತ್ತು ಎಸ್‍ಡಿಪಿಐ ಮೇಲೆ ಅನುಮಾನವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ ಎಂದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಯಾರ ಬಗ್ಗೆಯೂ ಪ್ರತಿಕ್ರಿಯಿಸುವುದಿಲ್ಲ. ಈ ಕೃತ್ಯವನ್ನು ಯಾರು ಮಾಡಿದ್ದಾರೆ ನಿರ್ದಿಷ್ಟವಾಗಿ ಹೇಳಲಾಗುತ್ತಿಲ್ಲ. ಯಾರೇ ದುಷ್ಕøತ್ಯವೆಸಗಿದ್ದರೂ ಪೊಲೀಸರು ಪತ್ತೆಹಚ್ಚುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪ್ರವೀಣ್ ಹತ್ಯೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರ ತಾಳ್ಮೆ ಕಟ್ಟೆ ಹೊಡೆದು ಆಕ್ರೋಶ ಭುಗಿಲೆದ್ದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾರ್ಯಕರ್ತರಲ್ಲಿ ಆಕ್ರೋಶ ವ್ಯಕ್ತವಾಗುವುದು ಸಹಜ. ಮೃತ ಪ್ರವೀಣ್ ತುಂಬಾ ಒಳ್ಳೆಯ ವ್ಯಕ್ತಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಬಿಜೆಪಿ ಕಾರ್ಯಕರ್ತರು ದೇಶದ ಹಿತಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರನ್ನು ನಾವು ನಿಭಾಯಿಸುತ್ತೇವೆ ಎಂದು ಹೇಳಿದರು.

Articles You Might Like

Share This Article