ರಾಜ್ಯದ ಪ್ರತಿ ಮೂರು ಜಿಲ್ಲೆಗೊಂದು SDRF ಪಡೆ ನಿಯೋಜನೆ

Social Share

ಬೆಂಗಳೂರು,ನ.7- ರಾಜ್ಯದ ಪ್ರತಿ ಮೂರು ಜಿಲ್ಲೆಗೆ ಒಂದು ಎಸ್‌ಡಿಆರ್‌ಎಫ್ ಪಡೆ ನಿಯೋಜನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಗೃಹ ಸಚಿವ ಆರಗ ಜಜ್ಞಾನೇಂದ್ರ ತಿಳಿಸಿದರು.

ರಾಜಭವನದಲ್ಲಿಂದು ರಾಜ್ಯ ಪೌರ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹಾಗೂ ಎಸ್‍ಡಿಆರ್‍ಎಫ್ ನಿರ್ದೇಶನಾಲಯ ವತಿಯಿಂದ ಹಮ್ಮಿಕೊಂಡಿದ್ದ ಜೀವದ ಹಂಗನ್ನು ತೊರೆದು ಸಂಕಷ್ಟಕ್ಕೆ ಒಳಗಾದ ಜನತೆಯನ್ನು ರಕ್ಷಿಸಿದ ಹಾಗೂ ವಿಶಿಷ್ಟ ಸೇವೆಗೈದ ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜ್ಯ ವಿಪತ್ತು ಹಾಗೂ ತುರ್ತು ಸೇವೆಗಳ ಪಡೆಯನ್ನು ಇನ್ನಷ್ಟು ಬಲಪಡಿಸಲು, ಪ್ರತಿ ಮೂರು ಜಿಲ್ಲೆಗಳಿಗೆ ಒಂದರಂತೆ ಎಸ್‍ಡಿಆರ್ ಎಫ್ ಪಡೆಗಳನ್ನು ನಿಯೋಜಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದರು.
ಪ್ರಾಕೃತಿಕ ಸಂಕಷ್ಟ ಸಂಭವಿಸಿದ ಸಮಯದಲ್ಲಿ ಕ್ಷಿಪ್ರವಾಗಿ ಸೇವೆ ಸಲ್ಲಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಲಾಗಿದೆ ಎಂದ ಅವರು, ನಾಗರಿಕರ ಸುರಕ್ಷತೆ ಹಾಗೂ ಆಸ್ತಿ ಪಾಸ್ತಿ ಗಳು, ಹಾಗೂ ಸಾರ್ವಜನಿಕ ಸೊತ್ತುಗಳ ರಕ್ಷಣೆ ಮಾಡಲು ಸರಕಾರ ಬದ್ಧವಾಗಿದೆ ಎಂದರು.

ಸಿದ್ದರಾಮಯ್ಯ ಕಾಂಗ್ರೆಸ್‍ ಗೆಲ್ಲುತ್ತೆ ಎಂಬ ಭ್ರಮೆಯಲ್ಲಿದ್ದಾರೆ : ಬೊಮ್ಮಾಯಿ

ಹಲವಾರು ವರ್ಷಗಳ ನಂತರ, ರಾಜ್ಯ ಅಗ್ನಿ ಶಾಮಕ ದಳ ವನ್ನು ಬಲಪಡಿಸಲು ಸುಮಾರು 1547 ವಿವಿಧ ದರ್ಜೆಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಹಾಗೂ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

ಅವಘಡದ ಸಂದರ್ಭದಲ್ಲಿ ಅತ್ಯಂತ ಎತ್ತರದ ಕಟ್ಟಡವನ್ನೂ ತಲುಪಲು ಅನುಕೂಲವಾಗುವಂತೆ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಏರಿಯಲ್ ಲ್ಯಾಡರ್‍ನ್ನು ಇಲಾಖೆಗೆ ಇತ್ತೀಚೆಗೆ ಸಮರ್ಪಿಸಲಾಗಿದೆ ಎಂದರು.
ಸಮಾರಂಭದಲ್ಲಿ ಸುಮಾರು 61 ಸಿಬ್ಬಂದಿಗಳಿಗೆ ಪದಕವನ್ನು ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು.

ಮುರುಗಾ ಶರಣರ ಪೋಕ್ಸ್ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗ..!

ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಗ್ನಿಶಾಮಕ ತುರ್ತು ಸೇವೆಗಳ ಇಲಾಖೆಯ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಮರಕುಮಾರ್ ಪಾಂಡೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Articles You Might Like

Share This Article