ಬೆಂಗಳೂರು,ಜು.30- ಹಿಂದೂಪರ ಸಂಘಟನೆಗಳು ಯಾವುದೇ ಕ್ಷಣದಲ್ಲೂ ಮುತ್ತಿಗೆ ಹಾಕಬಹುದೆಂಬ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಬಳಿ ಕೆಎಸ್‍ಆರ್‍ಪಿ ತುಕ್ಕಡಿ ನಿಯೋಜಿಸಲಾಗಿದ್ದು, ಬ್ಯಾರಿಕೇಡ್ ಕೂಡ ಅಳವಡಿಸಲಾಗಿದೆ. ಕಚೇರಿಗೆ ಬರುವವರನ್ನು ತಪಾಸಣೆ ನಡೆಸಿ ಒಳಬಿಡಲಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಮೂರು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದು ಯುವಕ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದರು.
ಈ ಘಟನೆಯಿಂದ ಕೆರಳಿರುವ ಹಿಂದೂಪರ ಹಾಗೂ ಎಬಿವಿಪಿ ಸೇರಿದಂತೆ ಮತ್ತಿತರ ಸಂಘಟನೆಗಳು ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಸಚಿವರು, ಶಾಸಕರು ಹಾಗೂ ಮುಖಂಡರ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಬಿಜೆಪಿ ಕಚೇರಿಗೂ ಮುತ್ತಿಗೆ ಹಾಕಬಹುದೆಂಬ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.