Friday, May 24, 2024
Homeರಾಜ್ಯಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಪತ್ತೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಪತ್ತೆ

ಶ್ರೀನಗರ, ಮಾ.20- ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ ಸಿಬ್ಬಂದಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪತ್ತೆ ಹಚ್ಚಿದ್ದಾರೆ. ಬಿಎಸ್‍ಎಫ್, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಈ ಭಾರಿ ಪ್ರಮಾಣದ ವಸ್ತು ವಶಪಡಿಸಿಕೊಳ್ಳಲಾಗಿದೆ ಎಂದು ಗಡಿ ಭಧ್ರತಾ ಪಡೆ ಅಧಿಕಾರಯೊಬ್ಬರು ತಿಳಿಸಿದ್ದಾರೆ.

ಗುಪ್ತಚರ ಮಾಹಿತಿ ಮೇಲೆ ಇಂದು ರಂಗವಾರ್, ಕುಪ್ವಾರ ಪ್ರದೇಶದಲ್ಲಿ ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅಡಗಿಸಿಟ್ಟಿದ್ದ 9 ಎಂಎಂ ಪಿಸ್ತೂಲ್ 01 ಮ್ಯಾಗ್ 29 ಆರ್ಡಿಎಸ್, 01 ಮ್ಯಾಗ್ ಎಕೆ 47/400 ರ್‍ಡಿಎಕ್ಸ್ , 02 ಕಾಮನ್ ಸೆಟ್‍ಗಳು, ಹ್ಯಾಂಡ್ ಗ್ರೆನೇಡ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

Latest News