Saturday, September 6, 2025
Homeಬೆಂಗಳೂರುಅತಿವೇಗದಿಂದ ಬಂದ ಬೈಕ್‌ ಡಿಕ್ಕಿಹೊಡೆದು ಸೆಕ್ಯೂರಿಟಿ ಗಾರ್ಡ್‌ ಸಾವು

ಅತಿವೇಗದಿಂದ ಬಂದ ಬೈಕ್‌ ಡಿಕ್ಕಿಹೊಡೆದು ಸೆಕ್ಯೂರಿಟಿ ಗಾರ್ಡ್‌ ಸಾವು

Security guard dies after being hit by speeding bike

ಬೆಂಗಳೂರು,ಸೆ.5- ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಹಿಂದಿರುಗುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಸಂಚಾರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಾಂತಿಪುರ ನಿವಾಸಿ ವೀರಾನಾಯ್ಕ್ (60) ಮೃತಪಟ್ಟ ಸೆಕ್ಯೂರಿಟಿ ಗಾರ್ಡ್‌.

ರಾತ್ರಿ 7 ಗಂಟೆ ಸುಮಾರಿನಲ್ಲಿ ಕೆಲಸ ಮುಗಿಸಿಕೊಂಡು ವೀರಾನಾಯ್ಕ್ ರವರು ನಡೆದುಕೊಂಡು ಶಾಂತಿಪುರ ರಸ್ತೆಯಲ್ಲಿ ಮನೆಗೆ ಹೋಗುತ್ತಿದ್ದಾಗ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಬೈಕ್‌ ಇವರಿಗೆ ಡಿಕ್ಕಿ ಹೊಡೆದಿದೆ.

ಗಂಭೀರ ಗಾಯಗೊಂಡಿದ್ದ ಸೆಕ್ಯೂರಿಟಿ ಗಾರ್ಡ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಎಲೆಕ್ಟ್ರಾನಿಕ್‌ ಸಿಟಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ 2 ಗಂಟೆ ಸುಮಾರಿನಲ್ಲಿ ಅವರು ಮೃತಪಟ್ಟಿದ್ದಾರೆ.ಈ ಬಗ್ಗೆ ಎಲೆಕ್ಟ್ರಾನಿಕ್‌ ಸಿಟಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News