ಸೆಲ್ಫಿ ಗೀಳಿಗೆ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು

Social Share

ರಾಯಚೂರು, ಸೆ.19- ಕಾಲುವೆ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಕಾಲು ಜಾರಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿರುವ ದಾರುಣ ಘಟನೆ ನಡೆದಿದೆ. ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್ ಹಾಗೂ ವೈಭವ್ ಮೃತಪಟ್ಟವರು. ಈ ವೇಳೆ ನಾಗೇಂದ್ರ ಹಾಗೂ ತರುಣ್ ಈಜಿ ದಡ ಸೇರಿದ್ದಾರೆ.

ಪಿಕ್‍ನಿಕ್‍ಗೆ ಹೋಗಿ ಬರುವುದಾಗಿ ಈ ನಾಲ್ವರು ವಿದ್ಯಾರ್ಥಿಗಳು ಮನೆಯಲ್ಲಿ ಹೇಳಿ ಕಲ್ಮಲ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ತೆರಳಿದ್ದಾರೆ. ಆ ಸಂದರ್ಭದಲ್ಲಿ ಸೆಲಿ ತೆಗೆದುಕೊಳ್ಳುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಈಜಿ ಇಬ್ಬರು ದಡ ಸೇರಿದ್ದು, ಇನ್ನಿಬ್ಬರು ನೀರು ಪಾಲಾಗಿದ್ದಾರೆ.

ತಕ್ಷಣ ಗ್ರಾಮಸ್ಥರಿಗೆ ವಿದ್ಯಾರ್ಥಿಗಳು ವಿಷಯ ತಿಳಿಸಿದ್ದಾರೆ. ಈಜುಗಾರರು ಆ ಇಬ್ಬರು ವಿದ್ಯಾರ್ಥಿಗಳನ್ನು ಬದುಕಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ನೀರು ಪಾಲಾದ ಸುಜಿತ್ ಹಾಗೂ ವೈಭವ್ ಮೃತದೇಹಗಳು 200 ಮೀಟರ್ ದೂರದಲ್ಲಿ ಪತ್ತೆಯಾಗಿವೆ.

ಈ ಬಗ್ಗೆ ಪೊಲೀಸರು ವಿದ್ಯಾರ್ಥಿಗಳ ಪೋಷಕರಿಗೆ ವಿಷಯ ತಿಳಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Articles You Might Like

Share This Article