ಮಾಜಿ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ನಿಧನ

Social Share

ಕೋಲ್ಕತಾ,ಜ.8- ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ನರಳುತ್ತಿದ್ದ 88 ವರ್ಷದ ತ್ರಿಪಾಠಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ಅವರು ಕುಟುಂಬ ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳ, ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಅವರು ಇಂದು ಮುಂಜಾನೆ ಉತ್ತರಪ್ರದೇಶದ ಪ್ರಯಾಗ್‍ರಾಜ್‍ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದಿದ್ದಾರೆ.

ಕಾಲು ಮುರಿತ ಹಾಗೂ ವಯೋಸಹಜ ಕಾಯಿಲೆಯಿಂದ ನರಳುತ್ತಿದ್ದ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆತರಲಾಗಿತ್ತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರೂ ಇಂದು ಮುಂಜಾನೆ 5ಗಂಟೆ ಸುಮಾರಿಗೆ ನಿಧನರಾಗಿದಾರೆ.

ಕಾಸರಗೂಡಿನಲ್ಲಿ ಬೀಡಿ ಕಟ್ಟುತ್ತಿದ್ದ ವ್ಯಕ್ತಿ ಇಂದು ಟೆಕ್ಸಾಸ್ ಜಿಲ್ಲಾ ನ್ಯಾಯಾಧೀಶ..!

ತ್ರಿಪಾಠಿ ನಿಧನಕ್ಕೆ ಕಂಬನಿ ಮಿಡಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದಲ್ಲಿ ಕೇಸರಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು ಎಂದು ಬಣ್ಣಿಸಿದ್ದಾರೆ. ಅದೇ ರೀತಿ ಬಿಜೆಪಿಯ ಹಲವಾರು ಹಿರಿಯ ಮುಖಂಡರು ತ್ರಿಪಾಠಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ನವೆಂಬರ್ 10, 1934 ರಂದು ಅಲಹಾಬಾದ್‍ನಲ್ಲಿ ಜನಿಸಿದ ತ್ರಿಪಾಠಿ ಅವರು ಜುಲೈ 2014 ರಿಂದ ಜುಲೈ 2019 ರವರೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ಅದಕ್ಕೂ ಮೊದಲು, ಅವರು ಬಿಹಾರ, ಮೇಘಾಲಯ ಮತ್ತು ಮಿಜೋರಾಂ ರಾಜ್ಯಪಾಲರಾಗಿದ್ದರು.

ಆರು ಬಾರಿ ಯುಪಿ ವಿಧಾನಸಭೆಯ ಸದಸ್ಯರಾಗಿದ್ದರು ಮತ್ತು 1977 ರಿಂದ 1979 ರವರೆಗೆ ಜನತಾ ಪಕ್ಷದ ಆಡಳಿತದಲ್ಲಿ ರಾಜ್ಯದಲ್ಲಿ ಸಾಂಸ್ಥಿಕ ಹಣಕಾಸು ಮತ್ತು ಮಾರಾಟ ತೆರಿಗೆಯ ಕ್ಯಾಬಿನೆಟ್ ಸಚಿವರಾಗಿದ್ದರು.

Senior, BJP leader, Kesari Nath Tripathi, passes away,

Articles You Might Like

Share This Article