ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಮುಂದಿನ ನಡೆ ಏನು..?

ಹುಬ್ಬಳ್ಳಿ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಬಿಜೆಪಿಯ ಪ್ರಮುಖ ನಾಯಕ ಹಾಗೂ ವಿಧಾನ ಪರಿಷತ್ ಸಿ.ಪಿ.ಯೋಗೇಶ್ವರ್ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ಬೆನ್ನಲ್ಲೆ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಎಂಎಲ್ಸಿ ಸ್ಥಾನಕ್ಕೆ ಸ್ವಯಿಚ್ಚೆಯಿಂದ ರಾಜೀನಾಮೆ ನೀಡಿದ್ದೇನೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟ … Continue reading ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಮುಂದಿನ ನಡೆ ಏನು..?