Friday, November 22, 2024
Homeರಾಷ್ಟ್ರೀಯ | Nationalರಕ್ಷಣಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾದ ಸಮೀರ್ ಕುಮಾರ್ ನೇಮಕ

ರಕ್ಷಣಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾದ ಸಮೀರ್ ಕುಮಾರ್ ನೇಮಕ

ನವದೆಹಲಿ, ಜ 9 (ಪಿಟಿಐ) ಕೇಂದ್ರದಿಂದ ಅಧಿಕಾರಶಾಹಿ ಪುನಾರಚನೆಯ ಭಾಗವಾಗಿ ಹಿರಿಯ ಐಎಎಸ್ ಅಧಿಕಾರಿ ಸಮೀರ್ ಕುಮಾರ್ ಸಿನ್ಹಾ ಅವರನ್ನು ರಕ್ಷಣಾ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕ (ಸ್ವಾೀಧಿನ) ಆಗಿ ನೇಮಿಸಲಾಗಿದೆ.

ಸಿನ್ಹಾ ಅವರು 1994-ಬ್ಯಾಚ್‍ನ ಭಾರತೀಯ ಆಡಳಿತ ಸೇವೆ (ಐಎಎಸ್ ) ಅಕಾರಿಯಾಗಿದ್ದು, ಪ್ರಸ್ತುತ ಅವರು ಅಸ್ಸಾಂ-ಮೇಘಾಲಯ ಕೇಡರ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯು ಅವರನ್ನು ರಕ್ಷಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕ (ಸ್ವಾೀಧಿನ) ಆಗಿ ನೇಮಕ ಮಾಡಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.

ಹಿಮಾಚಲ ಪ್ರದೇಶ ಕೇಡರ್‍ನ 1995 ಬ್ಯಾಚ್‍ನ ಐಎಎಸ್ ಅಧಿಕಾರಿ ಭರತ್ ಹರ್ಬನ್‍ಸ್ಲಾಲ್ ಖೇರಾ ಅವರನ್ನು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಚಂದ್ರಭೂಷಣ್ ಕುಮಾರ್ ಅವರು ಹೆಚ್ಚುವರಿ ಕಾರ್ಯದರ್ಶಿ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್‍ನ ಮಿಷನ್ ನಿರ್ದೇಶಕರಾಗಿರುತ್ತಾರೆ.

ಗಾಢ ಮಂಜಿನಿಂದಾಗಿ ಕಾರು ಟ್ರಕ್‍ಗೆ ಡಿಕ್ಕಿ, ಇಬ್ಬರು ಪೊಲೀಸರು ಬಲಿ

ಪ್ರಸ್ತುತ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದಲ್ಲಿ ಜಂಟಿ ಮಹಾನಿರ್ದೇಶಕರಾಗಿರುವ ಪೂಜಾ ಸಿಂಗ್ ಮಂಡೋಲ್ ಅವರನ್ನು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸ್ತುತ ಗೃಹ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿರುವ ಸಂಜೀವ್ ಕುಮಾರ್ ಜಿಂದಾಲ್ ಈಗ ಹೆಚ್ಚುವರಿ ಕಾರ್ಯದರ್ಶಿಯಾಗಲಿದ್ದಾರೆ. ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿರುವ ಬುಡಕಟ್ಟು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸೊಸೈಟಿಯ ಏಕಲವ್ಯ ಮಾದರಿ ವಸತಿ ಶಾಲೆಯ ಆಯುಕ್ತ ಅಸಿತ್ ಗೋಪಾಲ್ ಅವರನ್ನು ಜವಳಿ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿ ಮತ್ತು ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

RELATED ARTICLES

Latest News