ಬೆಂಗಳೂರು,ಜ.14- ಮುಂಬರುವ ವಿಧಾನಸಭಾ ಚುನಾವಣೆಯ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸುವ ಕಾರ್ಯ ತ್ವರಿತಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸಭೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಪೂರ್ವ ಸಿದ್ದತಾ ಸಭೆ ನಡೆಸಿದ ಆಯುಕ್ತರು ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಈ ಸೂಚನೆ ನೀಡಿದ್ಧಾರೆ.
ಸೂಕ್ಷ್ಮ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸಹಾಯಕ ಚುನಾವಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿ ಅದರ ಪಟ್ಟಿಯನ್ನು ಸಲ್ಲಿಸಲು ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮದ್ಯ ಖರೀದಿ ವಯೋಮಿತಿ 21ರಿಂದ 18ಕ್ಕಿಳಿಸಲು ಮುಂದಾದ ಸರ್ಕಾರ
ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಸಲುವಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ತೆಗೆದುಕೊಳ್ಳಬೇಕಾಗಿರುವ ಕ್ರಮಗಳು, ಸೂಕ್ಷ್ಮ ವಿಧಾನ ಸಭಾ ಕ್ಷೇತ್ರಗಳು ಹಾಗೂ ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ದಯಾನಂದ್. ಡಾ. ಹರೀಶ್ ಕುಮಾರ್, ವೆಂಕಟಾ ಚಲಪತಿ, ಜಗದೀಶ್ ನಾಯ್ಕ್, ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.
#SensitivePollingStation, #AssemblyElection2023,