ಕೊರೊನಾ ಸೋಂಕಿತ ಗರ್ಭಿಣಿಯರು, ಮಕ್ಕಳಿಗೆ ಪ್ರತ್ಯೇಕ ಆಸ್ಪತ್ರೆ ಮೀಸಲು

Social Share

ಬೆಂಗಳೂರು,ಜ.11-ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರ ಜತೆಗೆ ಮಕ್ಕಳು ಹಾಗೂ ಮಹಿಳೆಯರ ಮೇಲೆ ಮಹಾಮಾರಿ ಅಟ್ಟಹಾಸ ಮೆರೆಯುತ್ತಿರುವುದನ್ನು ಮನಗಂಡು ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗಾಗಿಯೇ ಎರಡು ಪ್ರತ್ಯೇಕ ಆಸ್ಪತ್ರೆಗಳನ್ನು ಮೀಸಲಿರಿಸಲಾಗಿದೆ.
ನಗರದ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಹಾಗೂ ಗೌಸಿಯಾ ಮೆಟರ್ನಿಟಿ ಆಸ್ಪತ್ರೆಗಳನ್ನು ಮಕ್ಕಳು ಹಾಗೂ ಗರ್ಭಿಣಿಯರ ಚಿಕಿತ್ಸೆಗೆ ಮೀಸಲಿರಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.ಸಿದ್ದಾಪುರದಲ್ಲಿರುವ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಹಾಗೂ ಶಿವಾಜಿನಗರದಲ್ಲಿರುವ ಗೌಸಿಯಾ ಆಸ್ಪತ್ರೆಗಳಲ್ಲಿ ಗರ್ಭಿಣಿಯರು ಮತ್ತು ಮಕ್ಕಳ ಆರೈಕೆ ನೋಡಿಕೊಳ್ಳುವಂತೆ ಆರೋಗ್ಯ ಇಲಾಖೆ ಬಿಬಿಎಂಪಿಗೆ ಸೂಚಿಸಿದೆ.
ಈಗಾಗಲೆ ಎರಡು ಆಸ್ಪತ್ರೆಗಳಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸೋಂಕಿತ ಗರ್ಭಿಣಿಯರು ಹಾಗೂ ಮಕ್ಕಳ ಚಿಕಿತ್ಸೆಗೆ ಬೇಕಾಗುವ ಎಲ್ಲಾ ಔಷದೋಪಚಾರ ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

Articles You Might Like

Share This Article