ಸೆ.20ರಂದು ಮಲೆನಾಡಿಗರನ್ನು ಉಳಿಸಿ ಪ್ರತಿಭಟನೆ

Social Share

ಬೆಂಗಳೂರು,ಸೆ.15- ಮಲೆನಾಡು ಜನಪರ ಒಕ್ಕೂಟದ ವತಿಯಿಂದ ಮಲೆನಾಡಿಗರನ್ನು ಉಳಿಸಿ ಎಂಬ ಒಂದು ದಿನದ ಪ್ರತಿಭಟನೆಯನ್ನು ನಗರದ ಪ್ರೀಡಂ ಪಾರ್ಕಿನಲ್ಲಿ ಇದೇ 20ರಂದು ಮಂಗಳವಾರ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಹಮ್ಮಿಕೊಳ್ಳಲಾಗಿದೆ.

ಮಲೆನಾಡಿಗರನ್ನು ಉಳಿಸಿ ಹೋರಾಟವನ್ನು ಹಲವು ವರ್ಷಗಳಿಂದ ನಡೆಸುತ್ತಿದ್ದು, ಕಳೆದ ಕೆಲವು ತಿಂಗಳಿನಿಂದ ಸಹಿ ಸಂಗ್ರಹದ ಜತೆಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಲಾಗಿತ್ತು. ಇದೀಗ ಮಲೆನಾಡಿಗರ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸಲಾಗುತ್ತಿದೆ.

ಸರ್ಕಾರಕ್ಕೆ ಅಹವಾಲನ್ನು ಕೊಟ್ಟ ನಂತರವೂ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇದೇ 20ರಂದು ಪ್ರತಿಭಟಿಸಲಾಗುತ್ತಿದೆ ಎಂದು ಒಕ್ಕೂಟ ತಿಳಿಸಿದೆ.

ಪಶ್ಚಿಮಘಟ್ಟ ತಪ್ಪಲಿನ ಮಲೆನಾಡು ಪ್ರದೇಶವನ್ನು ವಿಶೇಷ ಕೃಷಿ ವಲಯವಾಗಿ ಘೋಷಿಸುವಂತೆ ಒತ್ತಾಯಿಸುವುದು, ಮಲೆನಾಡಿನಲ್ಲಿ ಹಾಲಿನ ಘಟಕ ಸ್ಥಾಪಿಸಿ ಕೆಎಂಎಪ್ ಸಂಪರ್ಕ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

Articles You Might Like

Share This Article