Thursday, December 12, 2024
Homeರಾಜ್ಯರಾಜ್ಯ ಪೊಲೀಸರಿಗೆ ಬೇಕಾಗಿದ್ದ ಸೀರಿಯಲ್ ಕಿಲ್ಲರ್ ಗುಜರಾತಿನಲ್ಲಿ ಅರೆಸ್ಟ್

ರಾಜ್ಯ ಪೊಲೀಸರಿಗೆ ಬೇಕಾಗಿದ್ದ ಸೀರಿಯಲ್ ಕಿಲ್ಲರ್ ಗುಜರಾತಿನಲ್ಲಿ ಅರೆಸ್ಟ್

Serial killer wanted by state police arrested in Gujarat

ಗಾಂಧಿನಗರ,ನ.26– ಯುವತಿ ಮೇಲೆ ಅತ್ಯಾಚಾರ ಹಾಗೂ ಹಲವು ಕೊಲೆಯ ಪ್ರಕರಣದಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಸರಣಿ ಹಂತಕನನ್ನು ಬಂಧಿಸುವಲ್ಲಿ ಗುಜರಾತ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಹರ್ಯಾಣದ ಸಿರಿಯಲ್ ಕಿಲ್ಲರ್ ರೋಹ್ಟಕ್ನ ರಾಹುಲ್ ಜಾಟ್ ಬಂಧಿತ ಹಂತಕನಾಗಿದ್ದಾನೆ. 19 ವರ್ಷದ ಹಂತಕ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಆಕೆಯ ಶವ ಉದ್ವಾಡ ರೈಲು ನಿಲ್ದಾಣದ ಸಮೀಪವಿರುವ ಹಳಿಯ ಮೇಲೆ ನವೆಂಬರ್ 14ರಂದು ಪತ್ತೆಯಾಗಿತ್ತು.

ಆಕೆ ಟ್ಯೂಷನ್ನಿಂದ ಮನೆಗೆ ಹೋಗುವಾಗ ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಲ್ಸಾದ್ನ ವಾಪಿ ರೈಲ್ವೇ ನಿಲ್ದಾಣದ ಪಾರ್ಕಿಂಗ್ ಪ್ರದೇಶದಿಂದ ಸ್ಥಳೀಯ ಮತ್ತು ರೈಲ್ವೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಾಹುಲ್ ಜಾಟ್ನನ್ನು ಬಂಧಿಸಲಾಯಿತು.

ಜಾಟ್ ಪದೇ ಪದೇ ತಾನಿರುವ ಸ್ಥಳವನ್ನು ಬದಲಾಯಿಸುತ್ತಿದ್ದ. ಆತ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕರ್ನಾಟಕ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ರೈಲುಗಳು ಮತ್ತು ರೈಲು ನಿಲ್ದಾಣಗಳಲ್ಲಿ ಲೂಟಿ ಮತ್ತು ಕೊಲೆ ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದ. ಅಕ್ಟೋಬರ್ನಲ್ಲಿ ಮಹಾರಾಷ್ಟ್ರದ ಸೋಲಾಪುರ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಹೌರಾ ರೈಲು ನಿಲ್ದಾಣದ ಬಳಿ ಕತಿಹಾರ್ ಎಕ್‌್ಸಪ್ರೆಸ್ ರೈಲಿನಲ್ಲಿ ವದ್ಧನೊಬ್ಬನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಕರ್ನಾಟಕದ ಮೂಲ್ಕಿಯಲ್ಲಿ ರೈಲು ಪ್ರಯಾಣಿಕನನ್ನು ಹತ್ಯೆ ಮಾಡಿದ ಆರೋಪವನ್ನು ಜಾಟ್ ಎದುರಿಸುತ್ತಿದ್ದಾನೆ.

RELATED ARTICLES

Latest News