12 ವರ್ಷಗಳಲ್ಲಿ 500ಕ್ಕೂ ಹೆಚ್ಚು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಶುಕಾಮಿ ಟೈಲರ್..!
ನವದೆಹಲಿ, ಜ.16-ರಾಜಧಾನಿ ಟೈಲರ್ ಒಬ್ಬ ಕಳೆದ 12 ವರ್ಷಗಳಲ್ಲಿ 500ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದುರಾಚಾರ ಎಸಗಲು ಯತ್ನಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ 38 ವರ್ಷದ ಟೈಲರ್ ಸುನಿಲ್ ರಸ್ತೋಗಿ ಇದೇ ಅವಧಿಯಲ್ಲಿ 2,500ಕ್ಕೂ ಹೆಚ್ಚು ಮಕ್ಕಳ ಮೇಲೆ ಹಲ್ಲೆಗೂ ಯತ್ನಿಸಿರುವ ತನ್ನ ವಿಕೃತ ಚಾಳಿಯನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ಶಿಶುಕಾಮಿಯಾದ ಸುನಿಲ್ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 2006ರಲ್ಲಿ ಉತ್ತರಾಖಂಡ್ನ ರುದ್ರಾಪುರ್ನಲ್ಲಿ ಆರು ತಿಂಗಳ ಕಾಲ ಶಿಕ್ಷೆ ಅನುಭವಿಸಿದ್ದ.
ದೆಹಲಿ, ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಈ ಕೃತ್ಯಗಳನ್ನು ಎಸಗಿರುವ ಸುನಿಲ್ನ ಮುಖ್ಯ ಟಾರ್ಗೆಟ್ ಶಾಲಾ ಮಕ್ಕಳು. ಶಾಲೆ ಮತ್ತು ಮನೆಪಾಠಕ್ಕೆ ಹೋಗಿ ಬರುವ ಮಕ್ಳಳನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಪೂರ್ವ ದೆಹಲಿಯಲ್ಲಿನ ಟೈಲರ್ ಶಾಪ್ನಲ್ಲಿ ಕೆಲಕಾಲ ಕೆಲಸ ಮಾಡುತ್ತಿದ್ದ ಈತ ವೃತ್ತಿಯಲ್ಲೂ ತನ್ನ ಚಾಳಿ ಮುಂದುವರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ಈತನನ್ನು ಪೊಲೀಸರು ಬಂಧಿಸಿದ ನಂತರ ವಿಕೃತಕಾಮದ ವೃತ್ತಾಂತ ಬೆಳಕಿಗೆ ಬಂದಿದೆ. ದೆಹಲಿ, ರುದ್ರಾಪುರ್ ಮತ್ತು ಬಿಲಾಸ್ಪುರ್ಗಳಲ್ಲಿ ಇತ್ತೀಚೆಗೆ ನಡೆದಿದ್ದ ದುರಾಚರ ಪ್ರಕರಣಗಳಲ್ಲೂ ಈತ ಶಾಮೀಲಾಗಿದ್ದು, ತನಿಖೆ ಮುಂದುವರಿದಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS