ಏಳು ಕೆಜಿ ಗಾಂಜಾ ಜಪ್ತಿ

Social Share

ಬೆಂಗಳೂರು,ಫೆ.22- ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿ 7 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.  ನಾಗರಭಾವಿ 2ನೇ ಹಂತ, ಕೊಟ್ಟಿಗೆಪಾಳ್ಯ-ಕೆಂಗೇರಿ ನಡುವಿನ ರಿಂಗ್ ರಸ್ತೆಯ ಮರಳು ಲಾರಿ ಸ್ಟ್ಯಾಂಡ್ ಬಳಿ ನಾಲ್ವರು ಹೋಂಡಾ ಡಿಯೋ ವಾಹನದಲ್ಲಿ ಮಾದಕವಸ್ತು ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ನಾಲ್ವರನ್ನು ಬಂಧಿಸಿ 7 ಕೆ.ಜಿ 35 ಗ್ರಾಂ ತೂಕದ ಮಾದಕ ವಸ್ತು ಗಾಂಜಾ, 1,200 ನಗದು ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Articles You Might Like

Share This Article