Friday, May 24, 2024
Homeರಾಷ್ಟ್ರೀಯಟ್ರ್ಯಾಕ್ಟರ್ - ಜೀಪ್ ನಡುವೆ ಡಿಕ್ಕಿ: 7 ಮಂದಿ ಸಾವು

ಟ್ರ್ಯಾಕ್ಟರ್ – ಜೀಪ್ ನಡುವೆ ಡಿಕ್ಕಿ: 7 ಮಂದಿ ಸಾವು

ಖಗಾರಿಯಾ, ಮಾ 18 (ಪಿಟಿಐ) ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಪಸ್ರಾಹಾ ಪ್ರದೇಶದ ಪೆಟ್ರೋಲ್ ಪಂಪ್ ಬಳಿ ಇಂದು ಬೆಳಿಗ್ಗೆ 6.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೀಪಿನಲ್ಲಿ ಪ್ರಯಾಣಿಸುತ್ತಿದ್ದವರು ಮದುವೆ ಸಮಾರಂಭ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಟ್ರಾಕ್ಟರ್ ಓವರ್ ಲೋಡ್ ಆಗಿದ್ದು, ಅದಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಜೀಪ್ ನಲ್ಲಿದ್ದವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಾಯಗೊಂಡ ಎಲ್ಲ ಜನರನ್ನು ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಖಗಾರಿಯಾ ಪೊಲೀಸ್ ಚಂದನ್ ಕುಶ್ವಾಹ, ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು.

RELATED ARTICLES

Latest News