7ನೇ ವೇತನ ಆಯೋಗ ಮಧ್ಯಂತರ ವರದಿ ಅನುಷ್ಠಾನ

Social Share

ಬೆಂಗಳೂರು, ಫೆ.23- ಸರ್ಕಾರಿ ನೌಕರರ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಅನುಷ್ಠಾನ ಮಾಡಲು ಮುಂದಾಗಿದೆ. 7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನ ಹಾಗೂ ಒಪಿಎಸ್ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಸರ್ಕಾರಿ ನೌಕರರು ಮಾರ್ಚ್ 1 ರಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿತ್ತು.

ವಿಧಾನಸಭೆ ಚುನಾವಣೆ ಸನಿಹದ ಸಂದರ್ಭದಲ್ಲಿ ನೌಕರರು ಮುಷ್ಕರ ನಡೆಸಿದರೆ, ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ 7 ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಸ್ವೀಕರಿಸಿ 2023ರ ಜನವರಿ 1ರಿಂದ ಪೂರ್ವ ಅನ್ವಯವಾಗುಂತೆ ಅನುಷ್ಠಾನ ಮಾಡಲಿದೆ ಎಂದು ಸರ್ಕಾರದ ವಿಶ್ವಸನೀಯ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಲಿದ್ದು, ಸರ್ಕಾರಿ ನೌಕರರ ಬೇಡಿಕೆಗೆ ಅಸ್ತು ಎನ್ನಲು ಸಮ್ಮತಿಸಿದ್ದಾರೆ. ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡುವ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸರ್ಕಾರ ನೌಕರರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. 7ನೇ ವೇತನ ಆಯೋಗದ ವರದಿಯ ಶಿಫಾರಸಿನ ಅನುಷ್ಠಾನ ಹಾಗೂ ಒಪಿಎಸ್ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದರು.

ಜಾಗತಿಕ ಸಮಸ್ಯೆ ನಿವಾರಿಸುವಲ್ಲಿ ಭಾರತದ ಸಾಧನೆ ಮಹತ್ವದ್ದು : ಬಿಲ್‍ಗೇಟ್ಸ್

ಯಡಿಯೂರಪ್ಪ ಅವರ ಸಲಹೆಯನ್ನು ಬೊಮ್ಮಯಿ ಅವರು ಗಂಭೀರವಾಗಿ ತೆಗೆದುಕೊಂಡಿದ್ದು, ಬಜೆಟ್ ಮೇಲಿನ ಉತ್ತರದಲ್ಲಿ ಇದನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ನೂತನ ವೇತನ ಆಯೋಗದ ಶಿಫಾರಸಿನಿಂದ ನಿವೃತ್ತ ಸರ್ಕಾರಿ ನೌಕರರು ಸೇರಿದಂತೆ ಸುಮಾರು 13.5 ಲಕ್ಷ ಸರ್ಕಾರಿ ಉದ್ಯೋಗಿಗಳು, ನಿವೃತ್ತರಿಗೆ ಅನುಕೂಲವಾಗಲಿದೆ. ಈ ಪೈಕಿ 6 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ 3 ಲಕ್ಷ ನೌಕರರು ಮತ್ತು ಪಿಂಚಣಿ ಪಡೆಯುತ್ತಿರುವ 4.5 ಲಕ್ಷ ನಿವೃತ್ತ ನೌಕರರಿಗೆ ವೇತನ, ತುಟ್ಟಿಭತ್ಯೆಗಳು ಹೆಚ್ಚಾಗುವ ನಿರೀಕ್ಷೆ ಇದೆ.

ಕಳೆದ ಅಕ್ಟೋಬರ್ ತಿಂಗಳಲ್ಲಿ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ ತಿಂಗಳಲ್ಲಿ ಭರವಸೆ ನೀಡಿದ್ದರೂ, ಅಧಿಕೃತವಾಗಿ ಘೋಷಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವೇತನ ಆಯೋಗ ರಚನೆಗೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳು ಅಧಿಕೃತವಾಗಿ ವೇತನ ಆಯೋಗ ರಚಿಸುವುದಾಗಿ ಘೋಷಿಸಿದ್ದರು. ನವೆಂಬರ್ 19 ರಂದು ಈ ಆಯೋಗ ರಚನೆಯಾಗಿತ್ತು.

7ನೇ ವೇತನ ಆಯೋಗವು ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ (ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಯ ವೇತನ ಪಡೆಯುತ್ತಿರುವವರನ್ನು ಹೊರತು ಪಡಿಸಿ) ಹಲವು ಅಂಶಗಳನ್ನು ಪರಿಶೀಲನೆ ಮಾಡಿ ಮಧ್ಯಂತರ ವರದಿಯನ್ನು ನೀಡಿದೆ.

ವೇತನ, ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸಿ, ಕಾರ್ಯಸಾಧುವಾದ ನೂತನ ವೇತನ ಶ್ರೇಣಿಯನ್ನು ಶಿಫಾರಸು ಮಾಡುವುದು, ಕೇಂದ್ರದ ವೇತನ ಶ್ರೇಣಿಯನ್ನು ರಾಜ್ಯದಲ್ಲಿ ಅಳವಡಿಸುವ ಕುರಿತು ಪರಿಶೀಲಿಸುವುದು, ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ನೀಡಲು ಅನುಸರಿಸಬೇಕಾದ ಸೂತ್ರವನ್ನು ರೂಪಿಸುವುದು, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಪ್ರವಾಸ ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯಗಳನ್ನು ನಿಗದಿ ಪಡಿಸಲು ಹಾಗೂ ಸುಧಾರಣೆ ತರಲು ಸಲಹೆ ನೀಡುವುದು, ನಿವೃತ್ತಿ ವೇತನ ಮತ್ತು ಸಂಬಂಧಿತ ಸೌಲಭ್ಯಗಳ ಪರಿಷ್ಕರಣೆ ಮೊದಲಾದ ಅಂಶಗಳ ಕುರಿತು ವೇತನ ಆಯೋಗವು ಪರಿಶೀಲಿಸಿ ಶಿಫಾರಸು ನೀಡಿದೆ ಎಂದು ತಿಳಿದುಬಂದಿದೆ.

ಸರ್ಕಾರಿ ನೌಕರರ ಸಂಘ ಶೇ.40 ರಷ್ಟು ವೇತನ ಹೆಚ್ಚಳ ಮಾಡಬೇಕು, 1-7-2022 ರಿಂದ ಅನ್ವಯವಾಗುವಂತೆ ಕಾಲ್ಪನಿಕ ಸೌಲಭ್ಯ, 1-1-2023 ರಿಂದ ಆರ್ಥಿಕವಾಗಿ ಸೌಲಭ್ಯ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಇಟ್ಟಿದೆ. ಒಂದು ವೇಳೆ ಬೇಡಿಕೆಗೆ ಅನುಗುಣವಾಗಿ ವೇತನ ಹೆಚ್ಚಳವಾದರೆ ರಾಜ್ಯ ಸರ್ಕಾರಕ್ಕೆ ಹೆಚ್ಚುವರಿಯಾಗಿ ವರ್ಷಕ್ಕೆ ಸುಮಾರು 12,500 ಕೋಟಿ ರೂ. ಹೊರೆ ಬೀಳಲಿದೆ.

ಈಶಾನ್ಯ ರಾಜ್ಯಗಳಲ್ಲಿ CAA ಜಾರಿ ಮಾಡಲು ಬೀಡಲ್ಲ: ಮಮತಾ

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದರು.

ಮೂವರು ಸದಸ್ಯರ ನೇಮಕ ಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕರಾದ ಶ್ರೀಕಾಂತ್ ಬಿ. ವನಹಳ್ಳಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಮೂಲಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.

7ನೇ ವೇತನ ಆಯೋಗವು ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ (ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಯ ವೇತನ ಪಡೆಯುತ್ತಿರುವವರನ್ನು ಹೊರತು ಪಡಿಸಿ)ಯ ವೇತನ ಹಾಗೂ ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸಿ, ಕಾರ್ಯಸಾಧುವಾದ ನೂತನ ವೇತನ ಶ್ರೇಣಿಯನ್ನು ಶಿಫಾರಸು ಮಾಡುವುದು,

ಕೇಂದ್ರದ ವೇತನ ಶ್ರೇಣಿಯನ್ನು ರಾಜ್ಯದಲ್ಲಿ ಅಳವಡಿಸುವ ಕುರಿತು ಪರಿಶೀಲಿಸುವುದು, ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ನೀಡಲು ಅನುಸರಿಸಬೇಕಾದ ಸೂತ್ರವನ್ನು ರೂಪಿಸುವುದು, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಪ್ರವಾಸ ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯಗಳನ್ನು ನಿಗದಿ ಪಡಿಸಲು ಹಾಗೂ ಸುಧಾರಣೆ ತರಲು ಸಲಹೆ ನೀಡುವುದು, ನಿವೃತ್ತಿ ವೇತನ ಮತ್ತು ಸಂಬಂತ ಸೌಲಭ್ಯಗಳ ಪರಿಷ್ಕರಣೆ ಮೊದಲಾದ ಅಂಶಗಳ ಕುರಿತು ವೇತನ ಆಯೋಗವು ಪರಿಶೀಲಿಸಿಮಧ್ಯಂತರ ವರದಿಯನ್ನು ನೀಡಿದೆ ಎಂದು ಗೊತ್ತಾಗಿದೆ.

ಸರ್ಕಾರದ ಸಂಪನ್ಮೂಲಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲ ಮತ್ತು ವಿತ್ತೀಯ ಹೊಣೆಗಾರಿಕೆ ಅಧಿನಿಯಮ, 2002ರ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ವೇತನ ಆಯೋಗವು ಶಿಫಾರಸುಗಳನ್ನು ಮಾಡಿದೆ.

ಮಂಗಳವಾರ ರಾಜ್ಯದ 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಜಾರಿ ಮಾಡಬೇಕು ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಬೇಕು ಎಂಬ ಎರಡು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ. 1 ರಿಂದ ನೌಕರರ ಮುಷ್ಕರಕ್ಕೆ ರಾಜ್ಯ ಸರಕಾರಿ ನೌಕರರ ಸಂಘ ಕರೆ ನೀಡಿತ್ತು.

ಮೇಘಾಲಯದಲ್ಲಿ ಗೋಮಾಂಸ ಭಕ್ಷಣೆಗೆ ಬಿಜೆಪಿ ಅಡ್ಡಿಪಡಿಸಲ್ಲ

ನೌಕರ ಸಮುದಾಯದ ಈ ಬೇಡಿಕೆಗಳ ಬಗ್ಗೆ 2023 – 24ನೇ ಸಾಲಿನ ಬಜೆಟ್ನಲ್ಲಿ ಸರಕಾರ ಪ್ರಸ್ತಾಪ ಎಂದು ಸಭೆ ನಿರ್ಧರಿಸಿತ್ತು ಮಾಡದಿರುವ ಹಿನ್ನೆಲೆಯಲ್ಲಿ ಸಂಘದ ಕಚೇರಿಯಲ್ಲಿ ಸಂಸ್ಥೆಯ ಅಧ್ಯಕ್ಷ ಸಿ.ಎಸ್.ಪಡಾಕ್ಷರಿ ನೇತೃತ್ವದಲ್ಲಿ ಮಂಗಳವಾರ ನಡೆದ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿತ್ತು.

Seventh, Pay Commission, government, employees, CM Bommai,

Articles You Might Like

Share This Article