ನವದೆಹಲಿ, ಫೆ.26: ರಷ್ಯಾದ ಸೇನೆಗೆ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಹಲವಾರು ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ. ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ರಷ್ಯಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬಹುತೇಕರನ್ನು ಮುಕ್ತಗೊಳಿಸಲಾಗಿದೆ.
ಭಾರತೀಯ ಪ್ರಜೆಗಳ ಮೇಲಿರುವ ಎಲ್ಲಾ ಪ್ರಕರಣಗಳನ್ನು ರಷ್ಯಾದ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಮುಂದುವರಿಸುವುದು ಭಾರತದ ಆದ್ಯತೆಯ ವಿಷಯವಾಗಿದ್ದು ಅದಕ್ಕೆ ಬದ್ಧವಾಗಿದೆ ಎಂದು ತಿಳಿಸಲಾಗಿದೆ.
ವರದಿಗಳ ಪ್ರಕಾರ, ಹಲವಾರು ಭಾರತೀಯರು ರಷ್ಯಾದ ಮಿಲಿಟರಿಯಲ್ಲಿ ಭದ್ರತಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಅವರು ಉಕ್ರೇನ್‍ನೊಂದಿಗಿನ ರಷ್ಯಾದ ಗಡಿಯುದ್ದಕ್ಕೂ ಕೆಲವು ಪ್ರದೇಶಗಳಲ್ಲಿ ರಷ್ಯಾದ ಸೈನಿಕರೊಂದಿಗೆ ಹೋರಾಡಲು ಒತ್ತಾಯಿಸಲಾಯಿತು ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪಾಗಿ ಬಿತ್ತರಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.
ಬಲವಂತವಾಗಿ ಭೂ ಕಬಳಿಕೆ:ಟಿಎಂಸಿ ನಾಯಕ ಶಾಜಹಾನ್ ಬಂಧನ
ಈ ಬಗ್ಗೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತರಲಾದ ಪ್ರತಿಯೊಂದು ವಿಷಯವನ್ನು ರಷ್ಯಾದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಇದಲ್ಲದೆ ನವದೆಹಲಿಯಲ್ಲಿರುವ ರಷ್ಯಾದ ರಾಯಭಾರ ಕಚೇರಿಯೊಂದಿಗೆ ಮಾತುಕತೆ ನಡೆಸಿದ್ದೇವೆ ಇದರ ಫಲವಾಗಿ ಭಾರತೀಯರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರ, ವಕ್ತಾರ ರಣೀರ್ ಜೈಸ್ವಾಲ್ ಅವರು ರಷ್ಯಾದ ಸೈನ್ಯಕ್ಕೆ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುವ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಮಾಸ್ಕೋದೊಂದಿಗೆ ಸರ್ಕಾರ ಸಂಪರ್ಕದಲ್ಲಿದೆ ಮತ್ತು ಉಕ್ರೇನ್‍ನಲ್ಲಿನ ಸಂಘರ್ಷ ವಲಯದಿಂದ ದೂರವಿರಲು ಮನವಿ ಮಾಡಲಾಗಿತ್ತು ಎಂದು ತಿಳಿಸಿದರು.