Thursday, August 7, 2025
Homeರಾಜ್ಯಸಾರಿಗೆ ನೌಕರರು ಮುಷ್ಕರ ಹಿನ್ನೆಲೆಯಲ್ಲಿ ಹಲವು ವಿವಿ ಪರೀಕ್ಷೆಗಳು ಮುಂದೂಡಿಕೆ

ಸಾರಿಗೆ ನೌಕರರು ಮುಷ್ಕರ ಹಿನ್ನೆಲೆಯಲ್ಲಿ ಹಲವು ವಿವಿ ಪರೀಕ್ಷೆಗಳು ಮುಂದೂಡಿಕೆ

Several university exams postponed due to transport employees' strike

ಬೆಂಗಳೂರು,ಆ.5- ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದು ನಡೆಯಬೇಕಾಗಿದ್ದ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಶಾಲಾ-ಕಾಲೇಜುಗಳಿಗೆ ತೆರಳಲು ಬಸ್‌‍ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಇಂದು ನಡೆಯಬೇಕಿದ್ದ ಬಿಎ ಪದವಿ ಪರೀಕ್ಷೆಗಳನ್ನು ತುಮಕೂರು ವಿವಿ ಮುಂದೂಡಿಕೆ ಮಾಡಿದೆ. ತುಮಕೂರು ವಿ.ವಿಯ ಅಡಿಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ.

ಬಸ್‌‍ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಲು ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಎಲ್ಲಾ ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಿಕೆ ಆಗಿದೆ. ಮರು ನಿಗದಿಯಾದ ದಿನಾಂಕಗಳ ಬಗ್ಗೆ ಶೀಘ್ರವೇ ಮಾಹಿತಿ ನೀಡುವುದಾಗಿ ತುಮಕೂರು ವಿವಿ ಪ್ರಕಟಣೆ ಹೊರಡಿಸಿದೆ.

ಸಾರಿಗೆ ಇಲಾಖೆಯ ನೌಕರರ ಮುಷ್ಕರ ಹಿನ್ನೆಲೆ, ವಿವಿ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆಯಾಗಿದೆ. ಕೊಪ್ಪಳ ವಿವಿ ಕುಲಪತಿ ಬಿ.ಕೆ ರವಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದೂರದ ಊರುಗಳಿಂದ ಪರೀಕ್ಷೆ ಬರಬೇಕಾದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಹೀಗಾಗಿ ವಾಣಿಜ್ಯ, ಕಲಾ ಮತ್ತು ವಿಜ್ಞಾನ ವಿಭಾಗಗಳ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಗಂಗಾವತಿ, ಕನಕಗಿರಿ, ಕುಷ್ಟಗಿ ಮತ್ತು ವಿವಿಧ ಸ್ಥಳಗಳಿಂದ ಪರೀಕ್ಷೆಗೆ ಹಾಜರಾಗಬೇಕಾಗಿದ್ದ ವಿದ್ಯಾರ್ಥಿಗಳು, ಈ ಮುಷ್ಕರದಿಂದಾಗಿ ಅನಾನುಕೂಲಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ, ಇಂದಿನ ಪರೀಕ್ಷೆ ಮುಂದೂಡಲಾಗಿದೆ ಎಂದು ಕುಲಪತಿಗಳು ತಿಳಿಸಿದ್ದಾರೆ.

ಕೊಪ್ಪಳದ ಕುಕನೂರು ತಾಲೂಕಿನ ತಳಕಲ್‌ನಲ್ಲಿ ಇರುವ ವಿಶ್ವವಿದ್ಯಾಲಯ ಈ ಪರೀಕ್ಷೆಯನ್ನು ಆಯೋಜಿಸುತ್ತಿತ್ತು. ವಾಣಿಜ್ಯ, ಕಲಾ ಮತ್ತು ವಿಜ್ಞಾನ ವಿಭಾಗಗಳ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆಯಾಗಿದೆ. ಎರಡನೇ ಸೆಮಿಸ್ಟರ್‌ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆಯಾಗಿದ್ದು, ಮುಂದಿನ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಕುಲಪತಿಗಳು ಮಾಹಿತಿ ನೀಡಿದ್ದಾರೆ.

RELATED ARTICLES

Latest News