ನಟ ಶಶಿಕುಮಾರ್, ಮುದ್ದಹನುಮೇಗೌಡ ಸೇರಿ ಕಮಲ ಮುಡಿದ ಹಲವು ನಾಯಕರು

Social Share

ಬೆಂಗಳೂರು,ನ.3- ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಸೇರಿದಂತೆ ಮತ್ತಿತರರು ಅಧಿಕೃತವಾಗಿ ಕಮಲವನ್ನು ಮುಡಿಗೇರಿಸಿಕೊಂಡರು.

ಮುದ್ದಹನುಮೇಗೌಡರ ಜತೆ ಮಾಜಿ ಸಂಸದ ಹಾಗೂ ಜೆಡಿಎಸ್‍ನಲ್ಲಿದ್ದ ನಟ ಶಶಿಕುಮಾರ್, ನಿವೃತ್ತ ಐಎಎಸ್ ಅಧಿಕಾರಿ ಅನಿಲ್‍ಕುಮಾರ್ ಮತ್ತು ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾದರು.ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು, ಶಾಸಕರ ಸಮ್ಮುಖದಲ್ಲಿ ಸೇರ್ಪಡೆಯಾಗಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು.

ಈ ಹಿಂದೆ ಕಾಂಗ್ರೆಸ್‍ನಲ್ಲಿದ್ದ ಮುದ್ದಹನುಮೇಗೌಡ, ಜೆಡಿಎಸ್‍ನಲ್ಲಿ ನಟ ಶಶಿಕುಮಾರ್ ಮತ್ತು ಅನಿಲ್‍ಕುಮಾರ್ ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಮೂಲತಃ ಜನತಾ ಪರಿವಾರದವಾರಿದ್ದ ಮುದ್ದಹನುಮೇಗೌಡ ಜೆಡಿಎಸ್‍ನಲ್ಲಿ ಶಾಸಕರಾಗಿ ಕುಣಿಗಲ್ ಕ್ಷೇತ್ರವನ್ನು ಪ್ರತಿನಿಸಿದ್ದರು.

ನಂತರ ಕಾಂಗ್ರೆಸ್‍ಗೆ ಸೇರ್ಪಡೆಯಾಗಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಬಳಿಕ 2019ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಪಟ್ಟ ಕಾರಣ ಇವರಿಗೆ ಟಿಕೆಟ್ ಕೈ ತಪ್ಪಿತ್ತು.

PSI ನೇಮಕಾತಿ : ಮೊದಲ ರ‍್ಯಾಂಕ್‌ ಪಡೆದಿದ್ದ ಸುಪ್ರಿಯಾ ಅರೆಸ್ಟ್

ಅಲ್ಲಿಂದ ಕಾಂಗ್ರೆಸ್‍ನಿಂದ ದೂರವಾಗಿದ್ದ ಅವರು ಕುಣಿಗಲ್ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು. ಆದರೆ, ಹಾಲಿ ಶಾಸಕ ಡಾ.ರಂಗನಾಥ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಂಬಂಯಾಗಿರುವುದರಿಂದ ಟಿಕೆಟ್ ಸಿಗುವುದು ಅನುಮಾನ ಎಂಬ ಹಿನ್ನೆಲೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಒಂದು ಮೂಲದ ಪ್ರಕಾರ ಕುಣಿಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಿ.ಕೃಷ್ಣಕುಮಾರ್ ಸ್ರ್ಪಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.ಹಾಗೊಂದು ವೇಳೆ ಕುಣಿಗಲ್‍ನಿಂದ ಟಿಕೆಟ್ ಕೈ ತಪ್ಪಿದರೆ ಮುದ್ದಹನುಮೇಗೌಡರಿಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗುತ್ತದೆ.

# ಶಶಿಕುಮಾರ್:
ಸಂಯುಕ್ತ ಜನತಾದಳದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ಚಿತ್ರನಟ ಶಶಿಕುಮಾರ್ ಒಂದು ಬಾರಿ ಚಿತ್ರದುರ್ಗ ಲೋಕಸಭೆಗೆ ಆಯ್ಕೆಯಾಗಿದ್ದರು.

ನಂತರ ರಾಜಕೀಯ ಏರಳಿತದ ಕಾರಣಕ್ಕಾಗಿ ಅವರು ಕೂಡ ರಾಜಕೀಯ ತೆರೆಮರೆಗೆ ಸರಿದಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಆದರೆ, ಬಿಜೆಪಿ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ ಎದಿರುವ ಭಾರೀ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರಿಂದ ಜೆಡಿಎಸ್‍ನಿಂದಲೂ ದೂರವಾಗಿದ್ದರು.

ಸಾವಿನಲ್ಲೂ ಒಂದಾದ ದಂಪತಿ

ಇದೀಗ ಬಿಜೆಪಿಗೆ ಸೇರ್ಪಡೆಯಾಗಿರುವ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ರ್ಪಸುವ ಸಂಭವವಿದೆ. ಇವರಿಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರು ಕೂಡ ಸಮ್ಮತಿಸಿದ್ದಾರೆ ಎಂದು ತಿಳಿದು ಬಂದುದೆ.

# ಅನಿಲ್‍ಕುಮಾರ್:
ನಿವೃತ್ತ ಐಎಎಸ್ ಅಕಾರಿ ಅನಿಲ್‍ಕುಮಾರ್ ಬಿಬಿಎಂಪಿ ಆಯುಕ್ತರಾಗಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯದರ್ಶಿ, ಪ್ರಧಾನಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವವಿದೆ. ತುಮಕೂರು ಜಿಲ್ಲೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

Articles You Might Like

Share This Article