ಬೆಂಗಳೂರು,ಫೆ.17- ನಿರ್ಭಯ ಯೋಜನೆಯಡಿ ಜಾರಿಗೊಳಿಸಲು ತೀರ್ಮಾನಿಸಿದರುವ ಸೇಫ್ ಸಿಟಿ ಯೋಜನೆ ಕಾಮಗಾರಿಗೆ 261 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಣೆ ನೀಡಿದ್ದಾರೆ.
ಸಮಾಜದ ದುರ್ಬಲ ವರ್ಗದವರಲ್ಲಿ ಅದರಲ್ಲೂ ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ದ ಸೇಫ್ ಸಿಟಿ ಪ್ರಾಜೆಕ್ಟ್ ಅನ್ನು ಸಮರೋಪಾದಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯಡಿ 1640 ಸ್ಥಳಗಳಲ್ಲಿ 4100 ಕ್ಯಾಮರಾಗಳನ್ನು ಈಗಾಗಲೇ ಅಳವಡಿಸಲಾಗಿದೆ. ಈ ಕ್ಯಾಮರಾಗಳನ್ನು ಇಂಟಿಗ್ರೆಟೆಡ್ ಕಂಟ್ರೋಲ್ ಅಂಡ್ ಕಮಾಂಡ್ ಸೆಂಟರ್‍ಗೆ ಸಂಪರ್ಕ ಕಲ್ಪಿಸಿ ಭದ್ರತಾ ಕ್ರಮಗಳ ಮೇಲೆ ನಿಗಾವಹಿಸಲಾಗಿದೆ.
ರೈತರ ಅಲ್ಪಾವಧಿ ಸಾಲದ ಮಿತಿ 3 ರಿಂದ 5 ಲಕ್ಷಕ್ಕೆ ಏರಿಕೆ
ಮಹತ್ವಕಾಂಕ್ಷೆಯ ಈ ಯೋಜನೆಯನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ 261 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಬೊಮ್ಮಾಯಿ ಬಜೆಟ್ – 2023-2024 (Live Updates)
ಮಾರುಕಟ್ಟೆಗಳು, ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ಶೀ ಟಾಯ್ಲೆಟ್‍ಗಳನ್ನು ನಿರ್ಮಿಸಲಾಗುತ್ತಿದೆ. ಈ ಸಂಕೀರ್ಣಗಳಲ್ಲಿ ಶೌಚಾಲಯಗಳು, ಫೀಡಿಂಗ್ ರೂಮ್‍ಗಳು, ಮೊಬೈಲ್ ಚಾರ್ಜಿಂಗ್, ತುರ್ತು ಎಸ್‍ಓಎಸ್ ಸೌಲಭ್ಯ ಕಲ್ಪಿಸಲು 50 ಕೋಟಿ ರೂ.ಗಳ ಅನುದಾನ ನಿಗದಿಗೊಳಿಸಲಾಗಿದೆ.
#SheToilets, #Bengaluru, #BasavarajBommai, #Budget2023, #StateBudget2023, #BommaiBudget, #ಬಜೆಟ್, #ಬಜೆಟ್2023,