ಫೆ.27ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

Social Share

ಶಿವಮೊಗ್ಗ,ಜ.19- ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣವನ್ನುಮುಂದಿನ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ ಹೊರವಲಯದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಸಂಸದ ರಾಘವೇಂದ್ರ ಅವರೊಂದಿಗೆ ಅಂತಿಮ ಹಂತದ ಕಾಮಗಾರಿ ಪರಿಶೀಲಿಸಿದ ನಂತರ ಅವರು ಮಾತನಾಡಿದರು.

ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದ ಅವರು ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಇದು ರಾಜ್ಯದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಅತಿ ದೊಡ್ಡ ವಿಮಾನ ನಿಲ್ದಾಣವಾಗಲಿ ಉದ್ಘಾಟನೆ ಮಾಡುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದೆ.ಅದರಂತೆ ಫೆಬ್ರವರಿ 27 ರಂದು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಅಪ್ರಾಪ್ತನಿಗೆ ಶಿಕ್ಷೆ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸುಮಾರು 449 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದ್ದು ಕಡಿಮೆ ವೆಚ್ಚದಲ್ಲಿ ನಿರ್ಮಿಸಿದ ದೇಶದ ಮೊದಲ ವಿಮಾನ ನಿಲ್ದಾಣವಾಗಿದ್ದು, ವಿಮಾನಗಳು ರಾತ್ರಿ ವೇಳೆಯೂ ಇಳಿಯಲು ಬೇಕಾದ ಸುಧಾರಿತ ಸೌಲಭ್ಯಗಳನ್ನು ಹೊಂದಿರುತ್ತದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಸಂಸದ ರಾಘವೇಂದ್ರ ಮಾತನಾಡಿ, ಹಲವು ವಿಮಾನ ನಿಲ್ದಾಣಗಳು ಉದ್ಘಾಟನೆಗೊಂಡ ಎರಡ್ಮೂರು ವರ್ಷಗಳ ನಂತರ ಕಾರ್ಯಾಚರಣೆ ಆರಂಭಿಸಿವೆ. ಈ ವಿಮಾನ ನಿಲ್ದಾಣ ಉದ್ಘಾಟನೆಯಾದ ತಕ್ಷಣ ಕಾರ್ಯಾಚರಣೆ ಆರಂಭಿಸಲು ನಮ್ಮ ಅಕಾರಿಗಳು ವಿಮಾನಯಾನ ಸಂಸ್ಥೆಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕುವತ್ತ ಭಾರತ ದಾಪುಗಾಲು

ಪ್ರಸ್ತುತ ಸ್ಟಾರ್ ಏರ್ ಕಾರ್ಯನಿರ್ವಹಿಸಲು ಮುಂದೆ ಬಂದಿದೆ. ನಾವು ಇತರ ವಿಮಾನಯಾನ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಮೊದಲ ವಿಮಾನ ಕಾರ್ಯಾಚರಣೆ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಆರಂಭವಾಗಲಿದೆ. ಪ್ರಧಾನಿಯವರ ವಿಮಾನವು ಮೊದಲು ಇಲ್ಲಿ ಇಳಿಯಬೇಕೆಂದು ನಾವು ಬಯಸುತ್ತೇವೆ ಎಂದರು.

Shimoga, Airport, Inauguration, PM Modi, BS Yeddyurappa,

Articles You Might Like

Share This Article