ಡಾ. ಶ್ರೀ ಶಿವಕುಮಾರಸ್ವಾಮೀಜಿ ಪುಣ್ಯಸ್ಮರಣೆ, ಗದ್ದುಗೆಗೆ ವಿಶೇಷ ಪೂಜೆ

Social Share

ತುಮಕೂರು,ಜ.21- ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಹೆಸರಾಗಿರುವ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 3ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಶ್ರೀಗಳ ಗದ್ದುಗೆಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕೈಂಕರ್ಯಗಳು ನೆರವೇರಿದವು.
ಸಿದ್ಧಗಂಗಾ ಮಠಾೀಶರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ವೇದಘೋಷ ಮಂತ್ರಗಳೊಂದಿಗೆ ಮುಂಜಾನೆ ಪೂಜೆಯನ್ನು ವಿವಿಧ ಮಠದ ಶ್ರೀಗಳು ನಡೆಸಿದರು. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಚರಿಸಿದ್ದು, ಬೆಳಿಗ್ಗೆಯೇ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆಯನ್ನು ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ಮಾಡಲಾಗಿದ್ದು, ಮಹಾಪೂಜೆಯ ನಂತರ ಶ್ರೀ ಗದ್ದುಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಕೋವಿಡ್ 3ನೇ ಅಲೆ ಹರಡುತ್ತಿರುವುದರಿಂದ ಸರ್ಕಾರ ಮುನ್ನೆಚ್ಚರಿಕೆಯಾಗಿ ಹಲವು ನಿರ್ಬಂಧಗಳನ್ನು ಜಾರಿಗೊಳಿಸಿದೆ. ಈ ನಿಯಮಗಳನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಪ್ರತಿಯೊಬ್ಬರೂ ಸಹ ಸರ್ಕಾರದೊಂದಿಗೆ ಸಹಕರಿಸಬೇಕಾಗಿದೆ ಹಾಗೂ ಕೋವಿಡ್ ಹರಡದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಈ ಹಿನ್ನೆಲೆಯಲ್ಲಿ ಈ ವರ್ಷ ಶ್ರೀಗಳ ಪುಣ್ಯ ಸ್ಮರಣೆಯನ್ನು ಅತ್ಯಂತ ಸರಳವಾಗಿ ಧಾರ್ಮಿಕ ವಿವತ್ತಾಗಿ ಆಚರಿಸಲಾಗಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ತಿಳಿಸಿದರು. ನಿಯಮ ಪಾಲನೆಗೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುವುದರಿಂದ ಈ ಬಾರಿ ಶ್ರೀಗಳ ಪುಣ್ಯ ಸ್ಮರಣೆ ಅಂಗವಾಗಿ ಯಾವುದೇ ಸಭೆ, ಸಮಾರಂಭ ಇರುವುದಿಲ್ಲ. ಯಾವುದೇ ರೀತಿಯ ಮೆರವಣಿಗೆ ಇರುವುದಿಲ್ಲ. ಎಂದಿನಂತೆ
ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

Articles You Might Like

Share This Article