ಫೆಬ್ರವರಿಯಲ್ಲಿ ವಿಶಿಷ್ಟವಾಗಿ ರಾಜ್ಯಾದ್ಯಂತ ದಾಸೋಹ ದಿನ’ ಆಚರಣೆ

Social Share

ತುಮಕೂರು, ಜ.21- ದಾಸೋಹ ದಿನ ಫೆಬ್ರವರಿಯಲ್ಲಿ ವಿಶಿಷ್ಟ ಕಾರ್ಯಕ್ರಮವಾಗಿ ಇಡೀ ರಾಜ್ಯದಲ್ಲಿ ಆಚರಣೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಾಸೋಹ ದಿನದ ಪ್ರಯುಕ್ತ ವಿಶೇಷವಾಗಿ ದೊಡ್ಡ ಪ್ರಮಾಣದಲ್ಲಿ ದಾಸೋಹ ಮಂಟಪಗಳು ಮಠ-ಮಾನ್ಯಗಳಲ್ಲಿ ಆಗಬೇಕು. ಇದರ ಆಚರಣೆಗೆಂದು ರಜೆ ಘೋಷಿಸುವುದಿಲ್ಲ. ಆದರೆ ಗೌರವ ಸಲ್ಲಿಸುವ ಕೆಲಸ ಮಾಡಲಾಗುವುದು. ಬಸವಣ್ಣ ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿಗಳು ಕಾಯಕತತ್ವವನ್ನು ಪ್ರತಿಪಾದಿಸಿದ್ದು, ಅದರಂತೆ ನಾವು ನಡೆಯುತ್ತೇವೆ ಎಂದರು.

ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆಗೆ ಹರಿದು ಬಂದ ಭಕ್ತ ಸಾಗರ

ನಡೆದಾಡುವ ದೇವರು, ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸಂಸ್ಮರಣೆ ಕಾರ್ಯಕ್ರಮದಲ್ಲಿ
ಪಾಲ್ಗೊಳ್ಳಲು ಆಗಮಿಸಿದ್ದು, ಗದ್ದುಗೆಗೆ ನಮಸ್ಕಾರ ಮಾಡಿದ್ದು, ಸಂತೋಷ, ಸಮಾಧಾನವಿದೆ. ಅವರ ಆಶೀರ್ವಾದ ಈ ನಾಡಿನ ಜನತೆ ಮೇಲೆ ಇದೆ ಎಂಬ ಭಾವನೆಯಿಂದ ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.
ಸ್ವಾಮೀಜಿ ಹುಟ್ಟೂರಿನಲ್ಲಿ ಅವರ ಪ್ರತಿಮೆ ಸ್ಥಾಪನೆ ಕುರಿತು ಪರಿಶೀಲಿಸಿದ್ದು, ಅದಕ್ಕೆ ವೇಗ ನೀಡಲಾಗುತ್ತಿದೆ ಎಂದರು.

shivakumara swamiji, Dasoha Day, celebrated, February ,cm bommai,

Articles You Might Like

Share This Article