ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು : ಬಿಎಸ್‌ವೈ

Social Share

ಶಿವಮೊಗ್ಗ,ಫೆ.12-ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರಿಡುವಂತೆ ನಾಳೆ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಎಂದು ಅವರು ಹೇಳಿದ್ದಾರೆ. ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರು ಇಡುವುದೇ ಸೂಕ್ತ. ಈ ಸಂಬಂಧ ರಾಜ್ಯ ಸರ್ಕಾರ ನಿರ್ಣಯವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಗೆ ನಾಮಕರಣ ಕುರಿತು ಒಕ್ಕಲಿಗರ ಸಭೆ

ಯಡಿಯೂರಪ್ಪ ಅವರ ಹುಟ್ಟುಹಬ್ಬವಾದ ಫೆ.27ರಂದು ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮವಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ.

BIG NEWS : 12 ರಾಜ್ಯಗಳ ರಾಜ್ಯಪಾಲರ ಬದಲಾವಣೆ

ಈ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರನ್ನು ನಾಮಕರಣ ಮಾಡಬಾರದೆಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು.

Articles You Might Like

Share This Article