ಬಂಧಿತ ಹರ್ಷ ಹಂತಕರ ಪೂರ್ವಾಪರ ವರದಿಗೆ ಸೂಚನೆ

Social Share

ಬೆಂಗಳೂರು : ಶಿವಮೊಗ್ಗ ನಗರದಲ್ಲಿ ಸಮಾಜ ಘಾತುಕ ಶಕ್ತಿಗಳ ಬೆಳವಣಿಗೆಗಳಲ್ಲಿ ಪೊಲೀಸರ ಪಾತ್ರದ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಇದರ ಬಗ್ಗೆಯೂ ತನಿಖೆ ನಡೆಸಿ ಒಂದು ವಾರದಲ್ಲಿ ವಿಸ್ತೃತ ವರದಿ ನೀಡುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು , ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ಕೊಟ್ಟಿದ್ದಾರೆ.
ಈ ಕುರಿತು ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್‍ಗೆ ಪತ್ರ ಬರೆದಿರುವ ಅವರು, ಪೊಲೀಸರ ಬಗ್ಗೆ ಸಾಕಷ್ಟು ದೂರು ಬಂದಿರುವ ಕಾರಣ ವಿಸ್ತೃತ ತನಿಖೆ ನಡೆಸಿ ವಾರದಲ್ಲಿಯೇ ವರದಿ ನೀಡಬೇಕೆಂದು ಸೂಚಿಸಿದ್ದಾರೆ. ಕಳೆದ ಭಾನುವಾರ ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಬಂತರಾಗಿರುವ ಆರೋಪಿಗಳ ವಿರುದ್ಧ ಪೊಲೀಸರು ತೆಗೆದುಕೊಂಡಿರುವ ಕಾನೂನು ಕ್ರಮಗಳ ಕುರಿತಂತೆ ತನಿಖೆ ನಡೆಸಿ ವರದಿ ನೀಡುವಂತೆಯೂ ನಿರ್ದೇಶನ ನೀಡಿದ್ದಾರೆ.
ಹರ್ಷ ಕೊಲೆ ಪ್ರಕರಣಗಳಲ್ಲಿ ಬಂತರಾಗಿರುವ ಆರೋಪಿಗಳು ಕ್ರಿಮಿನಲ್ ಹಿನ್ನೆಲೆಯುಳ್ಳವರು ಎಂದು ಕೇಳಿಬಂದಿದೆ. ಶಿವಮೊಗ್ಗದ ದೊಡ್ಡಪೇಟೆ ಮತ್ತು ಕೋಟೆ ಪೊಲೀಸ್ ಠಾಣೆಗಳಲ್ಲಿ ಕಳೆದ ಐದು ವರ್ಷಗಳ ಅವಯಲ್ಲಿ ಇವರ ಮೇಲೆ ತೆಗೆದುಕೊಂಡಿರುವ ಕ್ರಮಗಳೇನು ಎಂಬುದರ ಬಗ್ಗೆ ವರದಿ ನೀಡಬೇಕೆಂದು ನಿರ್ದೇಶನ ನೀಡಿದ್ದಾರೆ.
ದೊಡ್ಡಪೇಟೆ ಮತ್ತು ಕೋಟೆ ಪೊಲೀಸ್ ಠಾಣೆಗಳಲ್ಲಿ ಕಳೆದ ಐದು ವರ್ಷಗಳ ಅವಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು/ ಸಿಬ್ಬಂದಿಗಳು ತೆಗೆದುಕೊಂಡ ಕ್ರಮಗಳೇನು? ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷಿಸಲಾದ ಲೋಪಗಳು, ಮೇಲಾಕಾರಿಗಳು ನೀಡಿರುವ ನಿರ್ದೇಶನಗಳನ್ನು ಸರಿಯಾಗಿ ಪಾಲನೆ ಮಾಡಲಾಗಿದೆಯೇ ಎಂಬುದರ ಬಗ್ಗೆಯೂ ವರದಿ ನೀಡುವಂತೆ ತಿಳಿಸಿದ್ದಾರೆ.
ಹರ್ಷ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಇವರೆಲ್ಲರೂ ಕ್ರಿಮಿನಲ್ ಹಿನ್ನೆಲೆಯುಳ್ಳವರು ಎಂದು ಕೇಳಿಬಂದ ಆರೋಪದ ಮೇಲೆ ಗೃಹ ಸಚಿವರು ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Articles You Might Like

Share This Article