ಶಿವಮೊಗ್ಗ, ಜೂ.22- ತೋಟದ ಮನೆಯಲ್ಲಿ ಮದ್ಯದ ಪಾರ್ಟಿ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಗೌತಮ ನಾಯಕ(22) ಹಾಗೂ ಸಂಜೀವ(22) ಎಂದು ಗುರುತಿಸಲಾಗಿದೆ. ಸುಮಾರು 10 ಮಂದಿ ಸ್ನೇಹಿತರ ತಂಡ ಎಡವಾಲ ಗ್ರಾಮದಲ್ಲಿರುವ ತೋಟದ ಮನೆಗೆ ಬಂದು ಅಲ್ಲಿ ರಾತ್ರಿ ಪಾರ್ಟಿ ನಡೆಸಿದರು.
ತಡರಾತ್ರಿ ಮದ್ಯದ ನಶೆಯಲ್ಲಿ ಒಬ್ಬ ಕೃಷಿ ಹೊಂಡದ ಬಳಿ ಹೋಗಿ ನೀರಿಗೆ ಬಿದಿದ್ದಾನೆ. ಇದನ್ನು ಕಂಡು ಮತ್ತೊಬ್ಬ ಆತನನ್ನು ರಕ್ಷಿಸಲು ನೀರಿಗಿಳಿದು ಆತನೂ ಸಹ ಮುಳುಗಿ ಸಾವನ್ನಪ್ಪಿದ್ದಾನೆ.
ಹೊಂಡದಲ್ಲಿ ಬಿದ್ದವರು ಏನಾದರು ಎಂದು ನೋಡುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಆತಂಕಗೊಂಡ ಇತರ ಸ್ನೇಹಿತರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ದಾವಿಸಿದ ಪೊಲೀಸರು ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ನಡೆದಿದೆ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ