ಮುರುಘಾ ಶ್ರೀ ವಿರುದ್ಧ ಪಿತೂರಿ, ಬಂಧಿತರಿಗೆ 14 ದಿನ ನ್ಯಾಯಾಂಗ ಬಂಧನ

Social Share

ಚಿತ್ರದುರ್ಗ,ನ.14- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀ ವಿರುದ್ಧ ಪಿತೂರಿ ನಡೆಸಿರುವ ಆರೋಪದ ಮೇಲೆ ಬಂಧಿತರಾಗಿರುವ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಸೋಮವಾರ ಅವರನ್ನು ಜಿಲ್ಲಾ ಒಂದನೇ ಹೆಚ್ಚುವರಿ ಜೆಎಂಎಫ್‍ಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾೀಧಿಶರು ಆರೋಪಿಗಳಾದ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದರು.

ಮೈದಾನದಲ್ಲಿ ಶಾಲೆ ನಿರ್ಮಾಣಕ್ಕೆ ವಿರೋಧ

ಮುರುಘಾ ಮಠದಲ್ಲಿದ್ದ 49 ಫೋಟೋಗಳನ್ನು ಕಳವು ಮಾಡಿದ್ದರ ಹಾಗೂ ಮುರುಘಾ ಶರಣರ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಪೊಲೀಸರು ಕಳೆದ ವಾರ ಬಂಧಿಸಿದ್ದರು.

ಹಿತಶತ್ರುಗಳ ಕಾಟದಿಂದ ಎಚ್ಚರಿಕೆ ಹೆಜ್ಜೆ ಇಡುತ್ತಿರುವ ಸಿದ್ದರಾಮಯ್ಯ

ಮುರುಘಾ ಮಠದ ಆಡಳಿತಾಧಿಕಾರಿಯಾಗಿದ್ದ ಎಸ್.ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಮೇಲೆ ಪಿತೂರಿ ನಡೆಸಿದ ಆರೋಪವಿದೆ. ಸದ್ಯ ಸೌಭಾಗ್ಯ ಬಸವರಾಜನ್ ತಲೆ ಮರೆಸಿಕೊಂಡಿದ್ದು ಪೊಲೀಸರು ತನಿಖೆಯನ್ನು ಚುರುಕು ಗೊಳಿಸಿದ್ದಾರೆ.

Articles You Might Like

Share This Article