ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಫೈರ್ ಫ್ಲೆ ೖ ಸಿನಿಮಾದ ಟೀಸರ್ ಹಾಗೂ ಹಾಡುಗಳು ಪ್ರೇಕ್ಷಕರಲ್ಲಿ ದೊಡ್ಡ ಮಟ್ಟದ ನಿರೀಕ್ಷೆಯನ್ನು ಮೂಡಿಸಿರುವುದು ಸುಳ್ಳಲ್ಲ.ಅದರಲ್ಲೂ ಶಿವಣ್ಣನ ಫಿಜ್ಜಾ ಡೆಲಿವರಿ ಬಾಯ್ ಪಾತ್ರದ ಬಗ್ಗೆಯಂತೂ ಅಭಿಮಾನಿಗಳಲ್ಲಿ ಕುತೂಹಲ ಜಾಸ್ತಿಯಾಗಿದೆ.
ಮಗಳ ಪ್ರಯತ್ನಕ್ಕೆ ಶಿವಣ್ಣ ತುಂಬಾ ಪ್ರೋತ್ಸಾಹವಾಗಿ ನಿಂತಿದ್ದಾರೆ. ಅಣ್ಣಾವ್ರ ಜನದಿನ ಇದೇ ತಿಂಗಳು 24. ಅಂದೇ ಚಿತ್ರ ತೆರೆಗೆ ಬರ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ಇತ್ತೀಚೆಗೆ ಶಿವಣ್ಣನ ನಿವಾಸದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯ್ರಕಮ ಹಮಿಕೊಳ್ಳಲಾಗಿತ್ತು. ಈ ವೇಳೆ ಫೈರ್ ಫ್ಲೈ ಇಡೀ ತಂಡ ಹಾಗೂ ಶಿವಣ್ಣ ದಂಪತಿ ಭಾಗಿಯಾಗಿ ಹೊಸಪ್ರತಿಭೆಗಳ ಕನಸಿಗೆ ಬೆನ್ನುತಟ್ಟಿದ್ದರು.
ಟ್ರೇಲರ್ ಬಿಡುಗಡೆ ಬಳಿಕ ಶಿವಣ್ಣ ಮಾತನಾಡಿ, ಮಗಳು ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ನಾನು ಕಥೆ ಕೇಳಿದೆ ವಿಭಿನ್ನವಾಗಿತ್ತು. ಕೇಳಿದ ತಕ್ಷಣ ಹೃದಯಕ್ಕೆ ಸೇರಿತು. ಸಾಕಷ್ಟು ವಿಷಯಗಳು ಚಿತ್ರದಲ್ಲಿವೆ. ಬರೀ ಫೈಟ್, ಡ್ಯುಯೇಟ್ ಸಾಂಗ್ ಮಾಡಬಹುದು. ಆದರೆ ಫೈರ್ ಫ್ಲೆ ೖ ವ್ಯಾಲ್ಯೂ ಸಬ್ಜ್ಟೆ್ ಇರುವ ಚಿತ್ರ. ವಂಶಿ ಒಳ್ಳೆ ಕಥೆ ಮಾಡಿದ್ದಾರೆ. ಒಳ್ಳೆ ತಂಡ ಚಿತ್ರಕ್ಕೆ ಕೆಲಸ ಮಾಡಿದೆ. ಚರಣ್ ರಾಜ್ ಸಂಗೀತ ಬಗ್ಗೆ ಮಾತನಾಡುವ ಆಗಿಲ್ಲ. ನಮ ಕನ್ನಡದಲ್ಲಿಯೂ ಹೊಸ ತಂಡ ಬರಬೇಕು. ಹೊಸ ಅಲೆ ಬರಬೇಕು ಎಂಬ ಉದ್ದೇಶದಿಂದ ನನ್ನ ಆಸೆ. ಹೊಸ ಹುಡುಗರು ನಮನ್ನು ಇನ್ನಷ್ಟು ಯಂಗ್ ಆಗಿ ತೋರಿಸಿದ್ದಾರೆ ಎಂದರು.
ಗೀತಾ ಶಿವರಾಜ್ ಕುಮಾರ್ ಮಾತನಾಡಿ, ಹೊಸ ತಂಡ ಹೊಸ ಪ್ರಯತ್ನ ಮಾಡಿದೆ. ಎಲ್ಲರೂ ಇದಕ್ಕೆ ಪ್ರೋತ್ಸಾಹ ಕೊಡಬೇಕು. ಈ ಚಿತ್ರವನ್ನು ಕುಮಾರ್ ಅವರು ಡಿಸ್ಟ್ರಿಬ್ಯೂಟ್ ಮಾಡುತ್ತಿದ್ದಾರೆ. ಅದಕ್ಕೆ ತುಂಬಾ ಧನ್ಯವಾದ. ವಂಶಿ ಹೇಳಿದ ಕಥೆ ಕೇಳಿ ಅವಳಿಗೆ ಅವರ ತಂದೆಗೂ ಇಷ್ಟವಾಯ್ತು. ಅದು ಈಗ ಇಲ್ಲಿವರೆಗೂ ಬಂದು ನಿಂತಿದೆ.
ಇದು ನನ್ನ ಮೊದಲ ಸಿನಿಮಾ. ತಾತನ ಹುಟ್ಟುಹಬ್ಬದ ದಿನ ಬರುತ್ತಿರುವುದು ಬಹಳ ಖುಷಿ ಇದೆ. ಕನ್ನಡ ಸಿನಿಮಾ ನೋಡಲು ಪ್ರೇಕ್ಷಕರು ಬರುತ್ತಿಲ್ಲ ಎಂದು ಎಲ್ಲರೂ ಕೇಳುತ್ತಾರೆ. ನಾವು ಅದಕ್ಕೆ ಒಳ್ಳೆ ಸಿನಿಮಾ ಕೊಟ್ಟರೆ ಖಂಡಿತ ಬರುತ್ತಾರೆ. ಏಪ್ರಿಲ್ 24 ಸಿನಿಮಾ ರಿಲೀಸ್ ಆಗುತ್ತಿದೆ. ಎಲ್ಲರೂ ಥಿಯೇರ್ಟ ನಲ್ಲಿಯೇ ಫೈರ್ ಫ್ಲೆ ೖ ಸಿನಿಮಾ ನೋಡಿ ಎಂದರು ನಿರ್ಮಾಪಕಿ ನಿವೇದಿತಾ ಶಿವರಾಜ್ ಕುಮಾರ್.