Monday, September 16, 2024
Homeರಾಷ್ಟ್ರೀಯ | Nationalತಮಿಳರ ಕ್ಷಮೆ ಕೋರಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ತಮಿಳರ ಕ್ಷಮೆ ಕೋರಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Shobha Karandlaje apologises to people of Tamil Nadu

ಚೆನ್ನೈ(ತಮಿಳುನಾಡು),ಸೆ.4- ರಾಮೇಶ್ವರಂ ಕಫ ಸ್ಫೋಟ ಪ್ರಕರಣಕ್ಕೂ ತಮಿಳರಿಗೂ ಸಂಬಂಧವಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳರ ಕ್ಷಮೆ ಯಾಚಿಸಿದ್ದಾರೆ.ಈ ಪ್ರಕರಣ ರದ್ದುಗೊಳಿಸುವಂತೆ ಶೋಭಾ ಪರವಾಗಿ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣ ನಿನ್ನೆ ಮತ್ತೆ ವಿಚಾರಣೆಗೆ ಬಂದಿತ್ತು.

ಕೋರ್ಟಿನಲ್ಲಿ ಶೋಭಾ ಪರ ವಾದ ಮಂಡಿಸಿದ ವಕೀಲರು, ಬೆಂಗಳೂರು ರಾಮೇಶ್ವರಂ ಕೆೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ ಎಂದರು.

ಬಾಂಬ್ ಸ್ಫೋಟ ಟದಲ್ಲಿ ತಮಿಳರು ಭಾಗಿಯಾಗಿದ್ದಾರೆ ಎಂಬ ಹೇಳಿಕೆಯನ್ನು ತಮಿಳರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ, ಅವರ ಹೇಳಿಕೆಯು ತಮಿಳರನ್ನು ನೋಯಿಸಿದೆ ಎಂದು ಅವರು ಅರ್ಥ ಮಾಡಿಕೊಂಡಿದ್ದಾರೆ ಮತ್ತು ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಕ್ಷಮೆ ಯಾಚಿಸಿದ್ದಾರೆ. ಹಾಗೂ ತಮಿಳರ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಬಗ್ಗೆ ಅವರಿಗೆ ಹೆಚ್ಚಿನ ಗೌರವವಿದೆ ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ.

ಇದೇ ವೇಳೆ ಸಚಿವೆ ಶೋಭಾ ಅವರ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುವುದಾಗಿ ಅವರ ಪರವಾಗಿ ಸಲ್ಲಿಸಿರುವ ಅಫಿಡವಿಟ್ನಲ್ಲಿ ತಿಳಿಸಲಾಗಿದೆ. ಇದಾದ ಬಳಿಕ ತಮಿಳುನಾಡಿನ ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು, ಸರ್ಕಾರದಿಂದ ಸೂಕ್ತ ಸೂಚನೆ ಪಡೆದು ತಿಳಿಸುವುದಾಗಿ ಹೇಳಿದರು.

ನಂತರ ನ್ಯಾಯಾಧೀಶರು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೆ.5 ರಂದು ನಡೆಸುವುದಾಗಿ ಹೇಳಿ ಪ್ರಕರಣವನ್ನು ಮುಂದೂಡಿದರು.

ಕರ್ನಾಟಕದ ಬೆಂಗಳೂರಿನ ರಾಮೇಶ್ವರಂ ಕೆೆಯ ಬಾಂಬ್ ಸ್ಫೋಟಕ್ಕೂ, ತಮಿಳುನಾಡಿನ ವ್ಯಕ್ತಿಗೂ ಸಂಬಂಧವಿದೆ ಎಂದು ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದರು. ನಂತರ ಈ ಸಂಬಂಧ ಡಿಎಂಕೆಯಿಂದ ತ್ಯಾಗರಾಜನ್ ನೀಡಿದ ದೂರಿನ ಆಧಾರದ ಮೇಲೆ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈನಲ್ಲಿ ಕೋಮುಗಲಭೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವುದು ಸೇರಿದಂತೆ 4 ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

RELATED ARTICLES

Latest News