Thursday, December 5, 2024
Homeರಾಜ್ಯಮಾಜಿ ಸಿಎಂಗಳ ಪುತ್ರರಿಗೆ ಸೋಲಿನ ಶಾಕ್ : ನಿಖಿಲ್‌ಗೆ ಹ್ಯಾಟ್ರಿಕ್ ಸೋಲು

ಮಾಜಿ ಸಿಎಂಗಳ ಪುತ್ರರಿಗೆ ಸೋಲಿನ ಶಾಕ್ : ನಿಖಿಲ್‌ಗೆ ಹ್ಯಾಟ್ರಿಕ್ ಸೋಲು

Nikhil Kumaraswamy

ಬೆಂಗಳೂರು,ನ.23- ರಾಜ್ಯದ ವಿಧಾನಸಭಾ ಉಪಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಸೋಲು ಕಾಣುವ ಮೂಲಕ ಸಂಸದರ ಪತ್ನಿ ಗೆದ್ದಿದ್ದಾರೆ. ಪ್ರತಿಷ್ಠಿತ ಹಾಗೂ ಹೈ ಪ್ರೊಫೈಲ್‌ ಕ್ಷೇತ್ರವಾಗಿದ್ದ ಚನ್ನಪಟ್ಟಣದಲ್ಲಿ ಕೇಂದ್ರ ಸಚಿವರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್‌ ಜೆಡಿಎಸ್‌‍ ಅಭ್ಯರ್ಥಿಯಾಗಿದ್ದರು.

ಅತ್ತ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮಾಯಿ ಅವರ ಪುತ್ರ ಭರತ್‌ ಬಿಜೆಪಿ ಅಭ್ಯರ್ಥಿಯಾಗಿದ್ದರು. ಆರಂಭಿಕವಾಗಿ ಈ ಇಬ್ಬರು ಗೆಲುವು ಸಾಧಿಸುವ ಮೂಲಕ ಕುಟುಂಬ ರಾಜಕಾರಣಕ್ಕೆ ಹಿನ್ನಡೆಯಾಗಿದೆ.

ಆದರೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಯಾಗಿದ್ದ ಸಂಸದ ಇ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಗೆಲುವು ಸಾಧಿಸುವ ಮೂಲಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚನ್ನಪಟ್ಟಣದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿಯಿಂದ ವಲಸೆ ಬಂದ ಸಿ.ಪಿ.ಯೋಗೇಶ್ವರ್‌ ಗೆಲುವು ಸಾಧಿಸಿದರೆ ಶಿಗ್ಗಾಂವಿಯಲ್ಲಿ ಬಿಜೆಪಿಯ ಪ್ರಾಬಲ್ಯವನ್ನು ಕಾಂಗ್ರೆಸ್‌‍ನ ಅಭ್ಯರ್ಥಿ ಯಾಸಿರ್‌ ಖಾನ್‌ ಪಠಾಣ್‌ ಹತ್ತಿಕ್ಕಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್‌‍ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದೆ.

RELATED ARTICLES

Latest News