ಚುನಾವಣಾ ರ‍್ಯಾಲಿ ವೇಳೆ ಟ್ರಂಪ್ ಮೇಲೆ ಗುಂಡಿನ ದಾಳಿ, ಪ್ರಾಣಾಪಾಯದಿಂದ ಪಾರು

ಚಿಕಾಗೋ, ಜು.14- ಅಮೆರಿಕದ ಮಾಜಿ ಅಧ್ಯಕ್ಷ ಮತ್ತು ಈ ವರ್ಷದ ನವೆಂಬರ್‍ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ಅವರು ಚುನಾವನಾ ರ್ಯಾಲಿಯಲ್ಲಿ ಮಾತನಾಡುತ್ತಿದ್ದಾಗ ಬಂದೂಕುಧಾರಿ ದುಷ್ಕರ್ಮಿಯೊಬ್ಬ ಗುಂಡಿನ ಮಳೆಗರೆದಿದ್ದು, ಗಾಯಗೊಂಡಿರುವ ಟ್ರಂಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಪೆನ್ಸಿಲ್ವೇನಿಯಾದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯನ್ನುದ್ದೇಶಿಸಿ ಟ್ರಂಪ್ ಅವರು ಭಾಷಣ ಮಾಡುತ್ತಿದ್ದಾಗ ಈ ಗುಂಡಿನ ದಾಳಿ ನಡೆದಿದೆ. ಅವರು ಸುರಕ್ಷಿತವಾಗಿದ್ದಾರೆ ಮತ್ತು ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಅವರಿಗೆ ಆರೈಕೆ ಮಾಡಲಾಗುತ್ತಿದೆ ಎಂದು ಟ್ರಂಪ್ ಅವರ ವಕ್ತಾರ … Continue reading ಚುನಾವಣಾ ರ‍್ಯಾಲಿ ವೇಳೆ ಟ್ರಂಪ್ ಮೇಲೆ ಗುಂಡಿನ ದಾಳಿ, ಪ್ರಾಣಾಪಾಯದಿಂದ ಪಾರು