ಬೆಂಗಳೂರು, ಫೆ.17- ನಾಡಿನ ಅನ್ನದಾತರಿಗೆ ಬಜೆಟ್‍ನಲ್ಲಿ ಬಂಪರ್ ಕೊಡುಗೆ ನೀಡಿದ್ದು, ಈ ವರ್ಷದಿಂದ ಬಡ್ಡಿರಹಿತ ಅಲ್ಪಾವ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೊಮ್ಮಾಯಿ ಬಜೆಟ್ – 2023-2024 (Live Updates)
ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು, ರೈತರ ಆರ್ಥಿಕ ಸದೃಢತೆಗಾಗಿ ಹಾಗೂ ಕೃಷಿ ಚಟುವಟಿಕೆಗಳ ಉತ್ತೇಜನಕ್ಕಾಗಿ ಅಲ್ಪಾವ ಸಾಲದ ಮೊತ್ತವನ್ನು ಹೆಚ್ಚಿಸಿದ್ದು, ಇದರಿಂದ ಕೃಷಿ ಚಟುವಟಿಕೆಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಿ ಹಾಗೂ ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತಾಗುತ್ತದೆ.
ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25 ಸಾವಿರ ಕೋಟಿ ರೂ.ಗಳಷ್ಟು ಸಾಲ ವಿತರಿಸಲಾಗುವುದು ಎಂದರು.
#ShortTermLoan #BasavarajBommai #Budget2023, #StateBudget2023, #BommaiBudget, #ಬಜೆಟ್ #ಬಜೆಟ್2023,