ನವದೆಹಲಿ,ಡಿ.2- ಶ್ರದ್ದಾ ವಾಲ್ಕರ್ ಹತ್ಯೆಯ ಆರೋಪಿ ಅಫ್ತಾಬ್ ಪೂನಾವಾಲ ಮಂಪರು ಪರೀಕ್ಷೆಯಲ್ಲಿ ನೀಡಿರುವ ಹೇಳಿಕೆಗಳ ಖಚಿತತೆ ದೃಢಪಡಿಸಿಕೊಳ್ಳಲು ತನಿಖಾಧಿಕಾರಿಗಳು ಮರು ವಿಚಾರಣೆ ನಡೆಸಿದ್ದಾರೆ.
ಪ್ರಕರಣದ ತನಿಖಾಧಿಕಾರಿಯೊಂದಿಗೆ ವಿಧಿವಿಜ್ಞಾನ ಪ್ರಯೋಗಾಲಯದ ನಾಲ್ವರು ಅಧಿಕಾರಿಗಳ ತಂಡ ಕೇಂದ್ರ ಕಾರಾಗೃಹಕ್ಕೆ ತೆರಳಿ ಆರೋಪಿ ಅಫ್ತಾಬ್‍ನನ್ನು ಮಂಪರು ಪರೀಕ್ಷೋತ್ತರ ವಿಚಾರಣೆಗೆ ಒಳಪಡಿಸಿದ್ದಾರೆ.
ಅಫ್ತಾಬ್‍ಗೆ ನ್ಯಾಯಾಲಯದ ನಿರ್ದೇಶನದ ಮೇರೆಗೆ ಗುರುವಾರದವರೆಗೆ ಯಶಸ್ವಿ ಮಂಪರು ಪರೀಕ್ಷೆ ನಡೆಸಲಾಗಿದೆ. ಶ್ರದ್ದಾ ಕೊಲೆ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದ್ದು, ಆರೋಪಿಯ ಕ್ರೂರತೆ ಚರ್ಚೆಗೆ ಗ್ರಾಸವಾಗಿದೆ.
ಗಡಿ ಭಾಗದಲ್ಲಿ ಮರಾಠಿ ಶಾಲೆ ಸ್ಥಾಪನೆಗೆ ತಡೆ
ಶ್ರದ್ದಾಳನ್ನು ಕೊಲೆ ಮಾಡಿದ ಬಳಿಕ 35 ತುಂಡಗಳನ್ನಾಗಿ ಕತ್ತರಿಸಿ ಬೇರೆ ಬೇರೆ ಸ್ಥಳದಲ್ಲಿ ಎಸೆದಿದ್ದ. ದೇಹದ ಕೆಲವು ತುಂಡುಗಳನ್ನು ವಶಪಡಿಸಿಕೊಂಡಿದ್ದ ಪೊಲೀಸರಿಗೆ ಬಾಕಿ ಉಳಿದ ಅವಶೇಷಗಳನ್ನು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ.
ಸಾಮಾನ್ಯ ಸ್ಥಿತಿಯಲ್ಲಿ ಆತನ ಹೇಳಿಕೆಗಳು ಪೊಲೀಸರ ತನಿಖೆಯನ್ನು ದಿಕ್ಕು ತಪ್ಪಿಸುವಂತಿದ್ದವು. ಹೀಗಾಗಿ ಮಂಪರು ಪರೀಕ್ಷೆ ನಡೆಸಿ ಮಾಹಿತಿ ಕೊಲೆ ಹಾಕಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಿದ್ದರು.
ಕನ್ನಡ ಬಾವುಟ ಹಾರಿಸಿದ ಯುವಕನಿಗೆ ಪೊಲೀಸ್ ಥಳಿತ : ತನಿಖೆಗೆ ಸಿಎಂ ಸೂಚನೆ
ನ್ಯಾಯಾಲಯದ ಸೂಚನೆ ಮೇರೆಗೆ ಮಂಪರು ಪರೀಕ್ಷೆ ನಡೆಸಲಾಗಿದೆ. ಆದರೆ ಸುಪ್ರೀಂಕೋರ್ಟ್‍ನ ತೀರ್ಪಿನ ಪ್ರಕಾರ ಮಂಪರು ಪರೀಕ್ಷೆ ಅಥವಾ ಸುಳ್ಳು ಪತ್ತೆ ಪರೀಕ್ಷೆ ವೇಳೆ ಆರೋಪಿ ನೀಡಿದ ಹೇಳಿಕೆಗಳನ್ನು ಪ್ರಾಥಮಿಕ ಸಾಕ್ಷ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ.
ಹೀಗಾಗಿ ತನಿಖಾಧಿಕಾರಿಗಳು ಪರೀಕ್ಷೋತ್ತರ ವಿಚಾರಣೆ ಮೂಲಕ ನೈಜ ಮಾಹಿತಿ ಕಲೆ ಹಾಕಿ ತನಿಖೆ ಮುಂದುವರೆಸಲು ಕ್ರಮ ಕೈಗೊಂಡಿದ್ದಾರೆ.
ಜಗತ್ತಿನ ಸೂಪರ್ ಪವರ್ ಪರಮಾಣು ರಾಷ್ಟ್ರವಾಗುತ್ತಾ ಉತ್ತರ ಕೊರಿಯಾ..?
Shraddha, murder, case, Aftab Poonawala, answers,