ಸೂರ್ಯಕುಮಾರ್ ದಾಖಲೆ ಮುರಿದ ಶ್ರೇಯಸ್‍ಅಯ್ಯರ್

Social Share

ಚತ್ತೋಗ್ರಾಮ್, ಡಿ. 15- ಬಾಂಗ್ಲಾ ದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‍ನ 2ನೆ ದಿನದಾಟದಲ್ಲಿ ಭಾರತದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್86 ರನ್ ಗಳಿಸಿ ಶತಕ ವಂಚಿತರಾದರು, ಸೂರ್ಯಕುಮಾರ್ ಯಾದವ್‍ರ ದಾಖಲೆ ಮುರಿದು ಗಮನ ಸೆಳೆದಿದ್ದಾರೆ.

ಮೊದಲ ದಿನದಾಟಕ್ಕೆ 82 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಶ್ರೇಯಸ್ ಅಯ್ಯರ್ ದ್ವಿತೀಯ ದಿನದಲ್ಲಿ ಶತಕ ಗಳಿಸುವ ಭರವಸೆ ಮೂಡಿಸಿದ್ದರಾದರೂ ಎಬಬೋಟ್ ಹುಸೇನ್ ಬೌಲಿಂಗ್‍ನಲ್ಲಿ ಕ್ಲೀನ್ ಬೌಲ್ಡ್ ಆಗುವ ಮೂಲಕ ಶತಕ ವಂಚಿತರಾದರು.

2022ರ ಪ್ರಸಕ್ತ ಸಾಲಿನಲ್ಲಿ ಶ್ರೇಯಸ್ ಅಯ್ಯರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರಲ್ಲದೆ, ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಬ್ಯಾಕಪ್ ಆಟಗಾರನಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು.

ಪ್ರೇಯಸಿ ಮೇಲಿನ ಕೋಪಕ್ಕೆ ಸ್ಕೂಟರ್‌ಗೆ ಬೆಂಕಿಯಿಟ್ಟ ಪ್ರಿಯಕರ

ನ್ಯೂಜಿಲೆಂಡ್ ವಿರುದ್ಧದ ಸರಣಿ ಹಾಗೂ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಶ್ರೇಯಸ್ ಅಯ್ಯರ್ ಈ ವರ್ಷ ತಾವಾಡಿರುವ 38 ಪಂದ್ಯಗಳಿಂದ 1489 ರನ್ ಗಳಿಸುವ ಮೂಲಕ ಭಾರತದ ಪ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‍ಮನ್ ಎಂಬ ಕೀರ್ತಿಗೆ ಭಾಜನರಾದರು.

ಟಿ 20 ಸ್ಪೆಷಾಲಿಸ್ಟ್ ಸೂರ್ಯಕುಮಾರ್ ಯಾದವ್, 43 ಪಂದ್ಯಗಳಿಂದ 1424 ರನ್ ಗಳಿಸಿ ನಂತರದ ಸ್ಥಾನದಲ್ಲಿದ್ದರೆ, ಟಿ 20 ವಿಶ್ವಕಪ್‍ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಮಾಜಿ ನಾಯಕ ವಿರಾಟ್ ಕೊಹ್ಲಿ 39 ಇನ್ನಿಂಗ್ಸ್‍ನಿಂದ 1278 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

136 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ : ಭವಿಷ್ಯ ನುಡಿದ ಡಿಕೆಶಿ

ಭಾರತದ ಯುವ ವಿಕೆಟ್ ಕೀಪರ್ ರಿಷಭ್ ಪಂತ್ ( 1278 ರನ್, 41 ಪಂದ್ಯ), ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ( 995 ರನ್, 40 ಇನ್ನಿಂಗ್ಸ್) ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿದ್ದಾರೆ.

Shreyas Iyer, Suryakumar Yadav, India, Bangladesh, highest run-scorer,

Articles You Might Like

Share This Article