Saturday, August 30, 2025
Homeರಾಜ್ಯನಾಳೆ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಪುಣ್ಯಾರಾಧನೆ

ನಾಳೆ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಪುಣ್ಯಾರಾಧನೆ

Shri Kumar Chandrasekharanath Swamiji Punyaradhana tomorrow

ಬೆಂಗಳೂರು, ಆ.30-ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಸಂಸ್ಥಾಪಕ ಪೀಠಾಧ್ಯಕ್ಷರಾಗಿದ್ದ ಬೈರವೈಕ್ಯ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ 16ನೇ ದಿನ ಪುಣ್ಯಾರಾಧನೆ ನಾಳೆ ನಡೆಯಲಿದೆ.

ಕೆಂಗೇರಿ ಬಳಿ ಇರುವ ಮಠದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಪುಣ್ಯಾರಾಧನೆ ನಡೆಯಲಿದೆ. ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಪುಣ್ಯಾರಾಧನೆಯ ಧಾರ್ಮಿಕ ವಿಧಿ, ವಿಧಾನಗಳು ನೆರವೇರಲಿವೆ.

ಭೈರವೈಕ್ಯ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ಪುಣ್ಯಾರಾಧನೆಯ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಬೇಲಿಮಠದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿ, ಮೈಸೂರು ರಾಮಕೃಷ್ಣಾಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ಮುಕ್ತಿದಾನಂದಜಿ ಮಹಾರಾಜ್‌, ಸುತ್ತೂರು ಮಠದ ಡಾ.ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲಸ್ವಾಮಿ, ಸ್ಪಟಿಕಪುರಿ ಮಠದ ಶ್ರೀ ನಂಜಾವಧೂತಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ವಹಿಸಲಿದ್ದಾರೆ.

ನಾಡಿನ ಹಲವಾರು ಆಧ್ಯಾತಿಕ ಚಿಂತಕರು, ಸಾಧುಸಂತರು, ಸಮಾಜ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸಾಹಿತಿಗಳು, ಕಲಾವಿದರು ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಪುಣ್ಯಾರಾಧನೆ ಅಂಗವಾಗಿ ನಡೆಯುವ ಧಾರ್ಮಿಕ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು, ಕೇಂದ್ರ ಸಚಿವರಾದ ಹೆಚ್‌.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ನ್ಯಾಯಮೂರ್ತಿ ವಿ.ಗೋಪಾಲಗೌಡರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಚಲುವರಾಯಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅೋಂಕ್‌, ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

RELATED ARTICLES

Latest News