ಕೋಲ್ಕತ್ತಾ, ನ.16-ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಕುತ್ತಿಗೆ ನೋವಿನಿಂದ ಬಳಲಿದ್ದ ಭಾರತ ತಂಡದ ನಾಯಕ ಶುಭಮನ್ ಗಿಲ್ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.
ಇಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಸೈಮನ್ ಹಾರ್ಮರ್ ಬೌಲಿಂಗ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಸ್ವೀಪ್ ಮಾಡಿದ ತಕ್ಷಣ ಭಾರತದ ನಾಯಕನಿಗೆ ಕುತ್ತಿಗೆ ನೋವು ಕಾಣಿಸಿಕೊಂಡಿತು ಮತ್ತು ತಂಡದ ವೈದ್ಯಕೀಯ ಸಿಬ್ಬಂದಿಯಿಂದ ಕೆಲವು ಆರಂಭಿಕ ಚಿಕಿತ್ಸೆಪಡೆದ ನಂತರ ಅವರು ಮೈದಾನವನ್ನು ತೊರೆದರು.
ದಿನದಾಟ ಮುಗಿದ ನಂತರ ಅವರನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಂಡದ ಆಡಳಿತ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಹಾಗಾಗಿ ಮುಂದಿನ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ.
ನಮ ವೈದ್ಯಕೀಯ ತಂಡವು ಕೂಡ ನಾಯಕನ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದೆ.ಗಿಲ್ ಅನುಪಸ್ಥಿತಿಯಲ್ಲಿ ಭಾರತವನ್ನು ಮುನ್ನಡೆಸಿದ್ದ ಉಪನಾಯಕ ರಿಷಭ್ ಪಂತ್, ಉಳಿದ ಪಂದ್ಯಗಳಲ್ಲೂ ತಂಡವನ್ನು ಮುನ್ನಡೆಸಲಿದ್ದಾರೆ.
