ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣ: 14 ಕಡೆ ಸಿಸಿಬಿ ದಾಳಿ..

Social Share

ಬೆಂಗಳೂರು,ಅ.12- ನಗರದ ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಂದು ನಗರದ 14 ಕಡೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ಬ್ಯಾಂಕ್ ಗ್ರಾಹಕರಿಗೆ ಅಧಿಕ ಬಡ್ಡಿ ಕೊಡುವುದಾಗಿ ಆಮಿಷವೊಡ್ಡಿ ವಂಚಿಸಿದೆ ಎಂದು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿವೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿತ್ತು. ಅದರಂತೆ ಸಿಸಿಬಿ ಇಂದು ಬೆಳಗ್ಗೆ ಕಾರ್ಯಾಚರಣೆ ಕೈಗೊಂಡು ವಿಲ್ಸನ್ ಗಾರ್ಡನ್, ಪೀಣ್ಯ, ರಾಜಗೋಪಾಲನಗರ, ಚಿಕ್ಕಜಾಲ ಸೇರಿದಂತೆ 14 ಕಡೆ ಏಕಕಾಲದಲ್ಲಿ ದಾಳಿ ಮಾಡಿ ದಾಖಲಾತಿಗಳನ್ನು ಪರಿಶೀಲಿಸಿದೆ.

ಬ್ಯಾಂಕ್‍ನ ನಿರ್ದೇಶಕರ ಮನೆಗಳು, ಕೆಲವು ಶಾಖೆಗಳು, ಕೇಂದ್ರ ಕಚೇರಿಗಳು, ನಿರ್ದೇಶಕರ ಸಂಬಂಧಿಕರ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದಾರೆ. ಐದು ಮಂದಿ ಎಸಿಪಿ, 14 ಮಂದಿ ಇನ್‍ಸ್ಪೆಕ್ಟರ್‍ಗಳು ಸೇರಿದಂತೆ 60ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ತಂಡಗಳನ್ನು ಮಾಡಿಕೊಂಡು ಈ ದಾಳಿ ನಡೆಸಿದ್ದಾರೆ.

ಐದು ಮಂದಿ ಬಂಧನ: ಶುಶೃತಿ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

Articles You Might Like

Share This Article