Tuesday, April 30, 2024
Homeರಾಜ್ಯಏ.1ರಂದು ಶ್ರೀ ಶಿವಕುಮಾರ ಸ್ವಾಮೀಜಿ ಅವರ 117ನೆ ಜಯಂತಿ

ಏ.1ರಂದು ಶ್ರೀ ಶಿವಕುಮಾರ ಸ್ವಾಮೀಜಿ ಅವರ 117ನೆ ಜಯಂತಿ

ತುಮಕೂರು, ಮಾ.30- ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 117ನೆ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ಏ.1ರಂದು ಬೆಳಿಗ್ಗೆ 11 ಗಂಟೆಗೆ ಸಿದ್ಧಗಂಗಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಸಂಸ್ಥೆಗಳ ಆಡಳಿತಾಧಿಕಾರಿ ಟಿ.ಕೆ.ನಂಜುಡಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಶ್ರೀಗಳ ಜಯಂತಿ ಆಚರಿಸಲಾಗುತ್ತಿದ್ದು, ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಹಿಸಲಿದ್ದು, ಅಧ್ಯಕ್ಷತೆಯನ್ನು ಮೈಸೂರು ಸುತ್ತೂರು ಮಠದ ಶ್ರೀ ಶಿವರಾತಿ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ಪತಂಜಲಿ ಯೋಗ ಗುರು ರಾಮದೇವ್ ಮಾಡಲಿದ್ದಾರೆ ಎಂದು ತಿಳಿಸಿದರು.

ದಿವ್ಯ ಸಾನಿಧ್ಯವನ್ನು ಮುಂಡರಗಿ ಮಹಾಸಂಸ್ಥಾನದ ಅಧ್ಯಕ್ಷರಾದ ಡಾ.ಶ್ರೀ ಅನ್ನದಾನೇಶ್ವರ ಸ್ವಾಮೀಜಿ, ಧಾರವಾಡ ಮುರುಘಮಠದ ಅಧ್ಯಕ್ಷರಾದ ಡಾ.ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಗದುಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷರಾದ ಶ್ರೀ ಕಲ್ಲಯ್ಯ ಅಜ್ಜ, ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ವಹಿಸಲಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಜನಪ್ರತಿನಿಧಿಗಳು ನಾಯಕರುಗಳಿಗೆ ವೇದಿಕೆ ಕಾರ್ಯಕ್ರಮಕ್ಕೆ ಆಮಂತ್ರಣವಿರುವುದಿಲ್ಲ. ಧಾರ್ಮಿಕ ಗುರುಗಳನ್ನು ಅತಿಥಿಗಳನ್ನಾಗಿ ಆಹ್ವಾನಿಸಿ ಗುರುವಂದನಾ ಮಹೋತ್ಸವ ನಡೆಸಲಾಗುತ್ತಿದೆ.

ಅಂದು ಬೆಳಗ್ಗೆ ಮುಂಜಾನೆಯಿಂದಲೇ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ನೆರವೇರಲಿದ್ದು, ಪುತ್ಥಳಿಯ ಮೆರವಣಿಗೆ ಕೂಡ ನಡೆಸಲಾಗುವುದು ಎಂದು ತಿಳಿಸಿದರು. ಜಯಂತಿ ಅಂಗವಾಗಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಗೆ ಅನ್ನ ದಾಸೋಹ ಏರ್ಪಡಿಸಿದ್ದು, ಊಟಕ್ಕೆ ಸಿಹಿಬೂಂದಿ, ಖಾರ ಬೂಂದಿ, ಚಿತ್ರಾನ್ನ, ಮಜ್ಜಿಗೆಯನ್ನು ಬಡಿಲಾಗುವುದು ಎಂದು ಮಠದ ಆಡಳಿತಾಧಿಕಾರಿ ವಿಶ್ವನಾಥ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಠದ ಸಹಾಯಕ ಆಡಳಿತಾಧಿಕಾರಿ ಮಲ್ಲಿಕಾರ್ಜುನಯ್ಯ, ಶಿವಕುಮಾರಯ್ಯ ಉಪಸ್ಥಿತರಿದ್ದರು.

RELATED ARTICLES

Latest News