ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

Social Share

ಬೆಂಗಳೂರು,ಡಿ.2- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಸುದೀರ್ಘ ಕಾಲದ ಮೂಲವ್ಯಾಯಿಂದ ಬಳಲುತ್ತಿದ್ದ ಅವರು ಇಂದು ಸಣ್ಣ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸಂಜೆ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ನಿರಂತರ ಓಡಾಟ, ದಣಿವಿನಿಂದ ಸಮಸ್ಯೆ ಎದುರಿಸುತ್ತಿದ್ದ ಸಿದ್ದರಾಮಯ್ಯ ಅವರು ನಾಲ್ಕು ದಿನಗಳ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದು, ಅದರ ಪ್ರಕಾರ ಎಲ್ಲ ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ರದ್ದುಗೊಳಿಸಿದ್ದಾರೆ.

ಕನ್ನಡ ಬಾವುಟ ಹಾರಿಸಿದ ಯುವಕನಿಗೆ ಪೊಲೀಸ್ ಥಳಿತ : ತನಿಖೆಗೆ ಸಿಎಂ ಸೂಚನೆ

ಮುಂದಿನ ತಿಂಗಳಿನಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸಜ್ಜುಗೊಂಡಿರುವ ಸಿದ್ದರಾಮಯ್ಯ ಆರೋಗ್ಯ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುತ್ತಿದ್ದಾರೆ.

ಜಗತ್ತಿನ ಸೂಪರ್ ಪವರ್ ಪರಮಾಣು ರಾಷ್ಟ್ರವಾಗುತ್ತಾ ಉತ್ತರ ಕೊರಿಯಾ..?

Siddaramaiah, admitted, hospital, minor surgery,

Articles You Might Like

Share This Article