‘ಸಿದ್ದು ನಿಜ ಕನಸುಗಳು’ ವಿವಾದಿತ ಪುಸ್ತಕ ಬಿಡುಗಡೆಗೆ ಕಾಂಗ್ರೆಸ್ ಆಕ್ರೋಶ

Social Share

ಬೆಂಗಳೂರು,ಜ.9- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ವಿರೂಪಗೊಳಿಸಿ ಮುಖಪುಟ ಮಾಡಿ ಪ್ರಕಟಿಸಲಾಗಿರುವ ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಕಾರ್ಯಕ್ರಮವನ್ನು ತಡೆ ಹಿಡಿಯುವಂತೆ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಪೋಲಿಸರಿಗೆ ದೂರು ನೀಡಿದ್ದಾರೆ.

ನಗರದ ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿರುವ ಅವರು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ದುರುದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಪುಸ್ತಕ ಪುನರ್ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದ ವಿವಾದಾತ್ಮಕ ವ್ಯಕ್ತಿ ರೋಹಿತ್ ಚಕ್ರತೀರ್ಥ ಹಾಗೂ ಇನ್ನಿತರ ವ್ಯಕ್ತಿಗಳು ಅತಿಥಿಗಳಾಗಲಿದ್ದಾರೆ.

ಬಂಧನಕ್ಕೊಳಗಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಮುಖ್ಯಸ್ಥೆ ಕೊಚ್ಚರ್ ಬಿಡುಗಡೆ

ಆಹ್ವಾನ ಪತ್ರಿಕೆ ಮುಖಪುಟ ನೋಡಿದಾಗಲೇ ಸಿದ್ದರಾಮಯ್ಯ ಅವರ ಕುರಿತು ಅವಹೇಳನಕಾರಿ, ಕಪೋಕಲ್ಪಿತ, ಪ್ರಚೋದನಾಕಾರಿ ಲೇಖನಗಳನ್ನು ಒಳಗೊಂಡಿರುವುದು ಸ್ಪಷ್ಟವಾಗಿದೆ. ಆಹ್ವಾನ ಪತ್ರಿಕೆಯಲ್ಲಿ ಇರುವ ಅತಿಥಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವಿಚಾರಗಳನ್ನು ಮತ್ತು ಒಂದು ಸಮುದಾಯದ ವಿರುದ್ಧ ಪ್ರಚೋದನೆ ನೀಡುವ ಬರಹಗಳನ್ನು ಪ್ರಕಟಿಸುವ ಮೂಲಕ ಅನೇಕ ವಿವಾದಗಳನ್ನು ಸೃಷ್ಟಿಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ ಎಂದು ಆರೋಪಿಸಲಾಗಿದೆ.

ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ವಿರೂಪಗೊಳಿಸಿ ಸಾಮಾರಸ್ಯ ಕದಡುವ ಹುನ್ನಾರ ಹೊಂದಿದ್ದು, ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ. ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು, ಒಂದು ವೇಳೆ ಅನುಮತಿ ಈಗಾಗಲೇ ನೀಡಿದ್ದರೆ ಅದನ್ನು ರದ್ದು ಮಾಡಿ, ಕಾಯಕ್ರಮ ಸ್ಥಗಿತಗೊಳಸಲು ಆಯೋಜಕರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಡಿದು ಚಿತ್ ಆಗಿದ್ದರಿಂದ ಮಹಿಳೆ ಮೇಲೆ ಮೂತ್ರ ಮಾಡಿದ್ದ ಮಿಶ್ರಾ

ಮತ್ತೊಂದೆಡೆ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಾಗಿ ಸಚಿವ ಅಶ್ವಥ್ ನಾರಾಯಣ್ ಟ್ವೀಟ್ ಮಾಡಿದ್ದು, ನೀವು ಬನ್ನಿ ಎಂದು ಸಾರ್ವಜನಿಕರಿಗೆ ಆಹ್ವಾನ ನೀಡಿದ್ದಾರೆ.

siddaramaiah, against, controversial, book release, Congress,

Articles You Might Like

Share This Article