ಬೆಂಗಳೂರು,ಮಾ.18- ಒಂದು ವೇಳೆ ಕೊನೆ ಕ್ಷಣದಲ್ಲಿ ಪಕ್ಷದ ನಿರ್ಧಾರಕ್ಕೆ ತಲೆಬಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಿದರೆ ಬಿಜೆಪಿ ಬಿ.ವೈ.ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಲೆಕ್ಕ ಹಾಕಿದೆ.
ಪಕ್ಷದ ನಿರ್ಧಾರಕ್ಕೆ ತಲೆಬಾಗಿ ವಿಜಯೇಂದ್ರ ವರುಣಾದಿಂದ ಅಖಾಡಕ್ಕಿಳಿದರೆ ಸಹಜವಾಗಿ ಈ ಕ್ಷೇತ್ರವು ರಾಷ್ಟ್ರದ ಗಮನ ಸೆಳೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರು ಇದೇ 25ರ ಬಳಿಕ ತಮ್ಮ ಸ್ಪರ್ಧೆಯ ನಿರ್ಧಾರವನ್ನು ಘೋಷಣೆ ಮಾಡಲಿದ್ದಾರೆ. ಕೋಲಾರ ಇಲ್ಲವೇ ವರುಣಾದಿಂದ ಒಂದು ಕ್ಷೇತ್ರವನ್ನು ಅವರು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಅಂತಿಮವಾಗಿ ಅವರು ವರುಣಾದಿಂದಲೇ ಸ್ಪರ್ಧೆ ಮಾಡಿದರೆ ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಿ ಕಟ್ಟಿ ಹಾಕಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ. ಈಗಾಗಲೇ ಶಿಕಾರಿಪುರದಿಂದ ಸ್ಪರ್ಧೆ ಮಾಡುವುದಾಗಿ ವಿಜಯೇಂದ್ರ ಘೋಷಣೆ ಮಾಡಿದ್ದಾರೆ.
ಒಂದೇ ಮಳೆಗೆ ಮುಳುಗಿದ ದಶಪಥ ಹೆದ್ದಾರಿ, ಸರಣಿ ಅಪಘಾತ, ರೊಚ್ಚಿಗೆದ್ದ ಜನ
ಈ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿರುವ ಕಾರಣ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ವರುಣಾದಿಂದ ಕಣಕ್ಕಿಳಿಯಬೇಕೆಂದು ಹೈಕಮಾಂಡ್ ಸಲಹೆ ಮಾಡಿದೆ ಎಂದು ತಿಳಿದುಬಂದಿದೆ.
ಇದೀಗ ಬಿಜೆಪಿ ಕೂಡ ರಾಜಕೀಯ ತಂತ್ರಗಾರಿಕೆಯನ್ನು ಬದಲಾಯಿಸಿದ್ದು, ವಿಜಯೇಂದ್ರಗೆ ಟಿಕೆಟ್ ನೀಡುವ ಕುರಿತು ಪಕ್ಷದ ವಲಯದಲ್ಲಿ ಚಿಂತನಮಂಥನ ನಡೆದಿದೆ. 2018ರ ವಿಧಾನಸಭಾ ಚುನಾವಣೆಯಲ್ಲೇ ವಿಜಯೇಂದ್ರಗೆ ವರುಣಾದಿಂದ ಸ್ಪರ್ಧೆ ಮಾಡಬೇಕೆಂಬ ಬೇಡಿಕೆ ಕೇಳಿಬಂದಿತ್ತು.
ಇದಕ್ಕಾಗಿ ಅವರು ಭರ್ಜರಿ ಸಿದ್ದತೆಯನ್ನು ಸಹ ಮಾಡಿಕೊಂಡಿದ್ದರು. ಆದರೆ ಕೊನೆಕ್ಷಣದಲ್ಲಿ ಪಕ್ಷದ ವರಿಷ್ಠರು ಹಿಂದೆ ಸರಿಯಬೇಕೆಂದು ಸೂಚನೆ ಕೊಟ್ಟಿದ್ದರಿಂದ ವಲ್ಲದ ಮನಸ್ಸಿನಿಂದಲೇ ಹಿಂದೆ ಸರಿದರು. ಈಗಾಗಲೇ ವಿಜಯೇಂದ್ರ ಶಿಕಾರಿಪುರದಲ್ಲಿ ಕಣಕ್ಕಿಳಿಯಲು ಬೇಕಾದ ಸಿದ್ದತೆಯನ್ನು ನಡೆಸಿದ್ದಾರೆ. ಕ್ಷೇತ್ರದಲ್ಲಿ ಎರಡು ಬಾರಿ ಪ್ರವಾಸವನ್ನು ಸಹ ನಡೆಸಿದ್ದಾರೆ.
ರಾಹುಲ್‍ಗಾಂಧಿ ಇಂದಿರಾ ನಡೆ ಅನುಸರಿಸಬೇಕಿತ್ತು ; ಶಾ
ವರುಣಾ ಕ್ಷೇತ್ರ ಏಕೆ?: ಈ ಕ್ಷೇತ್ರ ಕಾಂಗ್ರೆಸ್‍ನ ಭದ್ರಕೋಟೆ ಎಂದು ಹೇಳಿದರೂ ಕ್ಷೇತ್ರದಲ್ಲಿ ಲಿಂಗಾಯಿತ ಸೇರಿದಂತೆ ಬೇರೆ ಬೇರೆ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಈ ಕ್ಷೇತ್ರದಿಂದ ಸ್ರ್ಪಧಿಸಬೇಕೆಂದು ಒತ್ತಡ ಬಂದಿತ್ತು.
ರಾಜ್ಯಾದ್ಯಂತ ಸಿದ್ದರಾಮಯ್ಯ ಪ್ರವಾಸ ನಡೆಸದೆ ವರುಣಾ ಕ್ಷೇತ್ರಕ್ಕೆ ಸೀಮಿತಗೊಳಿಸುವ ನಿಟ್ಟಿನಲ್ಲಿ ವಿಜೇಂದ್ರನನ್ನು ಅಖಾಡಕ್ಕಿಳಿಸಲು ಬಿಜೆಪಿ ತೆರೆಮರೆಯಲ್ಲಿ ಕಸರತ್ತು ನಡೆಸಿದೆ. ಅಂತಿಮವಾಗಿ ಸಿದ್ದರಾಮಯ್ಯ ತೆಗೆದುಕೊಳ್ಳುವ ನಿರ್ಧಾರದ ಮೇಲೆ ವಿಜಯೇಂದ್ರ ಸ್ಪರ್ಧೆ ನಿರ್ಧಾರವಾಗಲಿದೆ.
siddaramaiah, by vijayendra, varuna, assembly, constituency,