ಚಿಕ್ಕಮಗಳೂರಿನಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಆಹ್ವಾನ

Social Share

ಚಿಕ್ಕಮಗಳೂರು, ಆ.5- ಕಾಫಿ ನಾಡು ಚಿಕ್ಕಮಗಳೂರು ಕ್ಷೇತ್ರದಿಂದ ಸ್ರ್ಪಧಿಸುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಆಹ್ವಾನ ನೀಡಿದರು. ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹಲವಾರು ಕ್ಷೇತ್ರಗಳಿಂದ ಸ್ರ್ಪಧಿಸುವಂತೆ ಆಹ್ವಾನ ಬರುತ್ತಿದ್ದು, ಈಗ ಚಿಕ್ಕಮಗಳೂರಿನಿಂದ ಸ್ರ್ಪಧಿಸುವಂತೆ ಸಚಿನ್ ಮಿಗಾ ಆಹ್ವಾನ ನೀಡಿದ್ದಾರೆ.

ಮೊನ್ನೆ ದಾವಣಗೆರೆಯಲ್ಲಿ ನಡೆದ ಅಮೃತ ಮಹೋತ್ಸವ ಸಮಾರಂಭದ ಸಂದರ್ಭದಲ್ಲಿ ಅವರು ಈ ಸಂಬಂಧ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. ಚಾಮರಾಜಪೇಟೆ, ವರುಣಾ, ಚಾಮುಂಡೇಶ್ವರಿ, ಬಾದಾಮಿ, ಕೋಲಾರ ನಗರ, ತುಮಕೂರು ನಗರ ಸೇರಿದಂತೆ 10ಕ್ಕೂ ಹೆಚ್ಚು ಕ್ಷೇತ್ರಗಳಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಆಹ್ವಾನ ಕೇಳಿಬರುತ್ತಿದೆ. ಈ ನಡುವೆ ಅವರು ಚಾಮುಂಡೇಶ್ವರಿಯಲ್ಲಿ ಸ್ರ್ಪಧಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಈಗ ಚಿಕ್ಕಮಗಳೂರಿನಿಂದ ಆಹ್ವಾನ ಬಂದಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರ ವರ್ತನೆಯಿಂದ ಜನ ಬೇಸತ್ತಿದ್ದಾರೆ. ಮಾಜಿ ಪ್ರಧಾನಿ ಇಂದಿರಾಗಾಂ ಅವರಿಗೆ ಪುನರ್ಜನ್ಮ ನೀಡಿದ ಕ್ಷೇತ್ರದಿಂದ ನಿಮ್ಮಂಥ ಜನನಾಯಕರು ಈ ಬಾರಿ ಸ್ರ್ಪಸಿದರೆ ಕಾಂಗ್ರೆಸ್ ಪಕ್ಷ ಮತ್ತಷ್ಟು ಚೈತನ್ಯ ಪಡೆಯಲಿದೆ ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

Articles You Might Like

Share This Article