ಸಿದ್ದರಾಮಯ್ಯ ಕಾಂಗ್ರೆಸ್‍ ಗೆಲ್ಲುತ್ತೆ ಎಂಬ ಭ್ರಮೆಯಲ್ಲಿದ್ದಾರೆ : ಬೊಮ್ಮಾಯಿ

Social Share

ಉಡುಪಿ, ನ.7- ಜನ ಕಾಂಗ್ರೆಸ್‍ನ್ನು ಗೆಲ್ಲಿಸುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭ್ರಮೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ 5 ವರ್ಷ ಆಡಳಿತ ಮಾಡಿದಾಗಲೂ ನಾವೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಯಡಿಯೂರಪ್ಪ ಹಾಗೂ ಹೆಚ್.ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ ಎನ್ನುತ್ತಿದ್ದರು. 77 ಸ್ಥಳಗಳಿಗೆ ಬಂದು ನಿಂತರು ಎಂದು ಟೀಕಿಸಿದರು.

ಅವರು ಅಧಿಕಾರ ನಡೆಸಿ ಕಾರ್ಯಕ್ರಮಗಳನ್ನು ಕೊಟ್ಟಾಗಲೇ ಜನ ತಿರಸ್ಕಾರ ಮಾಡಿದ್ದಾರೆ. ಒಡೆದಾಳುವ, ಸಮಾಜ ಒಡೆಯುವ ನೀತಿ, ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿರುವುದನ್ನು ಜನ ಮರೆತಿಲ್ಲ. ಅವರು ಹೇಳಿದ್ದಕ್ಕೆ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ತಿರುಗೇಟು ಕೊಟ್ಟರು.

ಚಂದ್ರಶೇಖರ್ ಸಾವಿನ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ : ಆರಗ ಜ್ಞಾನೇಂದ್ರ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ 50 ವರ್ಷ ಸಂಪೂರ್ಣ ಭ್ರಷ್ಟ ಸರ್ಕಾರವನ್ನೇ ನಡೆಸಿದೆ. ಭ್ರಷ್ಟಾಚಾರದಲ್ಲಿಯೇ ಮುಳುಗಿದ್ದರು. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಅವರಿಂದಲೇ ಪ್ರಾರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಭ್ರಷ್ಟಾಚಾರವಾಗಿದೆ. ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಸುಳ್ಳು ಆರೋಪ ಮಾಡುತ್ತಾರೆ. ಅವರ ಆರೋಪ ಸುಳ್ಳಿನಿಂದ ಕೂಡಿದೆ. ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಸುಳ್ಳು ಎಂಬುದು ಸ್ಪಷ್ಟವಾಗಿದೆ ಎಂದು ವ್ಯಂಗ್ಯ ಮಾಡಿದರು.

ಮುರುಗಾ ಶರಣರ ಪೋಕ್ಸ್ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗ..!

ಭತ್ತ ಖರೀದಿ ಕೇಂದ್ರ ಕರಾವಳಿಯಲ್ಲಿ ಭತ್ತ ಖರೀದಿ ಕೇಂದ್ರಕ್ಕೆ ಬೇಡಿಕೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಜನಸಂಕಲ್ಪ ಯಾತ್ರೆ ಕಲ್ಯಾಣ ಕರ್ನಾಟಕದಲ್ಲಿ ನಡೆದಿದ್ದು, ಕರಾವಳಿಯಲ್ಲಿ ಇಂದು ಪ್ರಾರಂಭವಾಗುತ್ತಿದೆ. ಪ್ರತಿಯೊಂದು ಕ್ಷೇತ್ರಕ್ಕೂ ಭೇಟಿ ನೀಡುತ್ತೇವೆ. ನಾಳೆ ಗದಗ, ಹಾವೇರಿ, ನಾಡಿದ್ದು ಬೆಳಗಾವಿಯಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಈ ಯಾತ್ರೆ ಮುಗಿದ ನಂತರ ಉತ್ತರ, ದಕ್ಷಿಣ ಎರಡೂ ದಿಕ್ಕಿನಿಂದ , ರಥ ಯಾತ್ರೆ ಪ್ರಾರಂಭವಾಗಲಿದ್ದು. 224 ಕ್ಷೇತ್ರಗಳಲ್ಲಿಯೂ ಕೂಡ ರಥಯಾತ್ರೆ ಸಂಚರಿಸಲಿದೆ ಎಂದು ಮಾಹಿತಿ ನೀಡಿದರು.

ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಸಾವಿನ ಪ್ರಕರಣ : ಮೂವರು ವಶಕ್ಕೆ

ಟೋಲ್ ಅಕ್ರಮದ ಬಗ್ಗೆ ಎನ್.ಹೆಚ್.ಐ.ಎ ಅವರಿಗೆ ವರದಿ ನೀಡಲಾಗಿದೆ. ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಭರವಸೆ ನೀಡಿದರು. ನವೀಕರಿಸಬಹುದಾದ ಇಂಧನ, ವಿಶೇಷವಾಗಿ ಹೈಡ್ರೋಜನ್ ಇಂಧನ, ಅಮೋನಿಯಾ ಕರಾವಳಿ ಪ್ರದೇಶದಲ್ಲಿಯೇ ಹೆಚ್ಚಿದ್ದು, ಮಂಗಳೂರು ಮತ್ತು ಉಡುಪಿ ಪ್ರದೇಶದಲ್ಲಿ ಹೂಡಿಕೆಯ ನಿರೀಕ್ಷೆಯಲ್ಲಿದ್ದೇವೆ. ಮುರುಘಾ ಮಠದ ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು, ಕಾನೂನಾತ್ಮಕ ಪ್ರಕ್ರಿಯೆ ಜÁರಿಯಲ್ಲಿದೆ ಎಂದರು.

Articles You Might Like

Share This Article