ಬೆಂಗಳೂರು, ನ.10- ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐದು ಮಂದಿ ಸಚಿವರು, ನಲವತ್ತಕ್ಕೂ ಅಧಿಕ ಶಾಸಕರು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಪ್ರಮುಖ ಕಾಂಗ್ರೆಸಿಗರು ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.
ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರೊಂದಿಗೆ ವಿಶೇಷ ವಿಮಾನದಲ್ಲಿ ತೆಲಂಗಾಣಕ್ಕೆ ತೆರಳಿದರು. ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ವಿಜಯವಾಡದ ಮೂಲಕ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡರು. ಕರ್ನಾಟಕದ ಮಾದರಿಯಲ್ಲಿ ತೆಲಂಗಾಣದಲ್ಲೂ ಗೆಲುವು ಸಾಧಿಸಬೇಕು ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ತನ್ನಲ್ಲೆಲ್ಲಾ ಬಲವನ್ನೂ ಕ್ರೋಢಿಕರಿಸಿದೆ.
ಸಂಪೂರ್ಣ ಕಣ್ಣು ಕಸಿ ಮಾಡುವಲ್ಲಿ ಅಮೆರಿಕ ವೈದ್ಯರು ಯಶಸ್ವಿ
ಕೆಪಿಸಿಸಿ ಪದಾಧಿಕಾರಿಗಳು, ಸಚಿವರು, ಶಾಸಕರು ಅಲ್ಲಿನ ಕ್ಷೇತ್ರವಾರು ಉಸ್ತುವಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಸಚಿವರು, ಶಾಸಕರು ಚುನಾವಣೆಯತ್ತ ಗಮನ ಹರಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತವೆ, ಅದಕ್ಕೆ ತಲೆ ಕೆಡಿಸಿಕೊಳ್ಳದ ಕಾಂಗ್ರೆಸಿಗರು ತೆಲಂಗಾಣ ಚುನಾವಣೆ ಗೆಲ್ಲಲು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ.