Monday, March 10, 2025
Homeರಾಜ್ಯಅಲ್ಪ ಸಂಖ್ಯಾತರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ

ಅಲ್ಪ ಸಂಖ್ಯಾತರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ

Siddaramaiah gives a huge gift to minorities

ಬೆಂಗಳೂರು,ಮಾ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ತಮ 16ನೇ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಕೊಡುಗೆ ಘೋಷಿಸಿದ್ದು, ಜೈನ, ಬೌದ್ಧ ಹಾಗೂ ಸಿಖ್‌್ಖ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಘೋಷಿಸಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

ಇನ್ನು ಕೆಇಎ ಮೂಲಕ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ. 50ರಷ್ಟು ಮರು ಪಾವತಿಸಲು ನಿರ್ಧರಿಸಲಾಗಿದೆ.
ಎಲ್‌ಕೆಜಿಯಿಂದ ದ್ವಿತೀಯ ಪಿ.ಯು.ಸಿ.ವರೆಗಿನ ಎಲ್ಲ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ 3 ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ ಎಸ್‌‍.ಎಸ್‌‍.ಎಲ್‌.ಸಿ ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು ಎಂದು ತಿಳಿಸಿದ್ದಾರೆ.

ಇದಕ್ಕಾಗಿ ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.

ಕಲಿಕಾ ಚಿಲುಮೆ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು, ಗಣಿತ ಗಣಕ ಕಾರ್ಯಕ್ರಮದಡಿ 3ರಿಂದ 5ನೇ ತರಗತಿ ದ್ಯಾರ್ಥಿಗಳಿಗೆ ಫೋನ್‌ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದಾಗಿ ತಿಳಿಸಿದ್ದಾರೆ.

ಓದು ಕರ್ನಾಟಕ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳ ಅಭಿವೃದ್ಧಿ, ಸರ್ಕಾರಿ ಶಾಲೆಗಳಲ್ಲಿ ಅತಿ ಕಡಿಮೆ ಕಲಿಕಾ ವಿಸ್ತರದಲ್ಲಿರುವ 6ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಮರುಸಿಂಚನ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದಾಗಿ ಭರವಸೆ ನೀಡಿದ್ದಾರೆ.

ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು ಇಕೆೆ-ಸ್ಟೆಪ್‌ ಸಂಸ್ಥೆಯ ಸಹಯೋಗದೊಂದಿಗೆ ಎಐ ಆಧಾರಿತ ಕಲಿಕಾದೀಪ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಿಸುವುದು. ಜ್ಞಾನಸೇತು ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್‌ ಅಕಾಡೆಮಿ ಸಹಯೋಗದಲ್ಲಿ ಯೋಜನೆ ರೂಪಿಸಲಾಗುವುದು. ರಾಜ್ಯದ 5,000 ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್‌ ಕಲಿಕೆ ಪರಿಚಯಿಸಲು ಅಗಸ್ತ್ಯ ಫೌಂಡೇಶನ್‌ ಸಹಯೋಗದೊಂದಿಗೆ ಐ-ಕೋಡ್‌ ಲ್ಯಾಬ್‌ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ಅಖಿ ಸೌಲಭ್ಯರುವ ಆಯ್ದ 63 ಶಾಲೆಗಳನ್ನು ಹಬ್‌ಗಳೆಂದು ಪರಿಗಣಿಸಿ 756 ಸ್ಪೋಕ್‌ ಶಾಲೆಗಳಿಗೆ ಅನುಕೂಲ ಕಲ್ಪಿಸಲಾಗುವುದು, ವಿದ್ಯಾಜೇತ ಕಾರ್ಯಕ್ರಮದಡಿ ಸರ್ಕಾರಿ ಪದ ಪೂರ್ವ ಕಾಲೇಜುಗಳ 25,000 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿ ನೀಡಲಾಗಿದ್ದು, ಈ ಯೋಜನೆ ಮುಂದುವರಿಸಲು 5 ಕೋಟಿ ರೂ. ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

RELATED ARTICLES

Latest News