Friday, November 22, 2024
Homeರಾಜ್ಯತೆಲಂಗಾಣದ BRS ನಾಯಕರಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

ತೆಲಂಗಾಣದ BRS ನಾಯಕರಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿ.19- ಬೆಳಗಾವಿಯ ಸುವರ್ಣಸೌಧದ ವಿಧಾನಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ತಿರುಚಿದ ವಿಡಿಯೋವನ್ನು ಹಂಚಿಕೊಂಡಿದ್ದ ತೆಲಂಗಾಣದ ಬಿಆರ್‍ಎಸ್ ಪಕ್ಷದ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಮಾಜಿ ಸಚಿವರೂ ಆಗಿರುವ ಬಿಆರ್‍ಎಸ್‍ನ ಕೆ.ಟಿ.ರಾಮರಾವ್ ಅವರು ಬಿಜೆಪಿಯ ಐಟಿ ಸೆಲ್‍ನಿಂದ ವೈರಲ್ ಮಾಡಿದ್ದ ವಿಡಿಯೋವನ್ನು ಹಂಚಿಕೊಂಡು ಕರ್ನಾಟಕದಲ್ಲಿ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಹಣವಿಲ್ಲ ಎಂದು ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ತೆಲಂಗಾಣದಲ್ಲೂ ಇದೇ ರೀತಿಯ ವಾತಾವರಣ ನಿರ್ಮಾಣವಾಗಲಿದೆ. ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸಿ ಅಧಿಕಾರ ಹಿಡಿಯುವ ಮೊದಲು ತಾವು ನೀಡುವ ಭರವಸೆಗಳ ಬಗ್ಗೆ ತನಿಖಾ ಪ್ರಮಾಣದ ಅಧ್ಯಯನವನ್ನಾದರೂ ನಡೆಸಬೇಕಿತ್ತಲ್ಲವೇ ಎಂದು ಕೆ.ಟಿ.ಆರ್ ಪ್ರಶ್ನಿಸಿದ್ದಾರೆ.

ಕಾಶ್ಮೀರದಲ್ಲಿ ರೋಹಿಂಗ್ಯಾಗಳಿಗೆ ಆಶ್ರಯ ನೀಡಿದವರ ವಿರುದ್ಧ ಎಫ್‍ಐಆರ್

ಇದಕ್ಕೆ ಸಾಮಾಜಿಕ ಜಾಲತಾಣದಲ್ಲೇ ತಿರುಗೇಟು ನೀಡಿರುವ ಸಿದ್ದರಾಮಯ್ಯ, ತೆಲಂಗಾಣದಲ್ಲಿ ನಿಮ್ಮ ಪಕ್ಷ ಏಕೆ ಸೋತಿದೆ ಎಂದು ನಿಮಗೆ ಗೊತ್ತಿದೆಯೇ?, ನಿಮಗೆ ಕನಿಷ್ಟ ನಕಲಿಯಾದ ಅಥವಾ ತಿರುಚಿದ ವಿಡಿಯೋವನ್ನು ಗುರುತಿಸಲು ಸಾಧ್ಯವಾಗಿಲ್ಲ, ಸತ್ಯವನ್ನು ಕಂಡುಕೊಳ್ಳಲು ಬರುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ.

ಬಿಜೆಪಿಯವರು ತಿರುಚಿದ ನಕಲಿ ವಿಡಿಯೋವನ್ನು ಸೃಷ್ಟಿಸಿದ್ದಾರೆ. ನಿಮ್ಮ ಪಕ್ಷವೂ ಅದನ್ನು ಪ್ರಸರಣ ಮಾಡುತ್ತಿದೆ. ಬಿಜೆಪಿಯ ಬಿಟೀಂ ಆಗಲು ಬಿಆರ್‍ಎಸ್ ಪಕ್ಷ ಸೂಕ್ತವಾಗಿದೆ. ನಿಮಗೆ ಸತ್ಯವನ್ನು ತಿಳಿದುಕೊಳ್ಳಬೇಕೆಂದಿದ್ದರೆ ನನ್ನದೆ ಸಾಮಾಜಿಕ ಜಾಲತಾಣದಲ್ಲಿರುವ ಪೂರ್ಣ ಪ್ರಮಾಣದ ಮಾಹಿತಿಯನ್ನು ಓದಿಕೊಳ್ಳಿ ಎಂದು ಲಿಂಕ್ ಒಂದನ್ನು ಶೇರ್ ಮಾಡಿದ್ದಾರೆ.

RELATED ARTICLES

Latest News