ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

Social Share

ಬೆಂಗಳೂರು,ಜು.18- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅರೆ ಅಲೆಮಾರಿಯಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಲು ಅವರಿಗೆ ಇನ್ನು ಯಾವುದೇ ಕ್ಷೇತ್ರ ಸಿಕ್ಕಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯನವರು ಕೊನೆಗೆ ಚಾಮರಾಜಪೇಟೆಗೆ ಬಂದು ನಿಲ್ಲುತ್ತಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಅಮೇಥಿ ಕ್ಷೇತ್ರ ಬಿಟ್ಟು ಕೇರಳದ ವಯನಾಡಿಗೆ ಬಂದರು. ಅದೇ ರೀತಿಯ ದುಸ್ಥಿತಿ ಸಿದ್ದರಾಮಯ್ಯನವರಿಗೂ ಬರಲಿದೆ ಎಂದರು.

ಸಿದ್ದರಾಮೋತ್ಸವಕ್ಕೂ ಕಾಂಗ್ರೆಸ್‍ಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದನ್ನು ನೋಡಿದರೆ ಯಾರಿಗೆ ಹೊಟ್ಟೆಕಿಚ್ಚು ಎಂಬುದು ಗೊತ್ತಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‍ನವರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡರೆ ಭಯವಿದೆ. ರಾಹುಲ್‍ಗಾಂಧಿ, ಪ್ರಿಯಾಂಕ ಗಾಂಧಿಯವರು ರಾಜ್ಯಕ್ಕೆ ಬಂದರೆ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಹೇಳಿದರು.

Articles You Might Like

Share This Article