ಸರ್ಕಾರದಲ್ಲಿ ಆಡಳಿತ ನಡೆಯುತ್ತಿಲ್ಲ ಎಂದು ಸಚಿವರೇ ಹೇಳಿದ್ದಾರೆ : ಸಿದ್ದರಾಮಯ್ಯ

Social Share

ಬೆಂಗಳೂರು, ಆ.16- ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಹೇಳಿಕೆ ಆಧರಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಸಿದ್ದರಾಮಯ್ಯ ಮಾತನಾಡಿ, ಮಾಧುಸ್ವಾಮಿ ಒಬ್ಬ ಹಿರಿಯ ಸಚಿವರು. ನಮ್ಮ ಸರ್ಕಾರದಲ್ಲಿ ಆಡಳಿತ ನಡೆಯುತ್ತಿಲ್ಲ. ಸರ್ಕಾರವನ್ನು ತಳ್ಳಿಕೊಂಡು ಹೋಗುತ್ತಿದ್ದೇವೆ ಎಂದಿದ್ದಾರೆ. ಸಚಿವರಾಗಿಯೇ ಮಾಧುಸ್ವಾಮಿ ಈ ಹೇಳಿಕೆ ಕೊಟ್ಟಿದ್ದಾರೆ. ಈ ಸತ್ಯವನ್ನು ಮರೆಮಾಚಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೊಮ್ಮಾಯಿ ಮುಂದಾಗಿದ್ದಾರೆ ಎಂದು ಹೇಳಿದರು.

ಕೆಲವು ಸಚಿವರನ್ನುಎತ್ತಿ ಕಟ್ಟಿ ಮುನಿರತ್ನ, ಸೋಮಶೇಖರ್ ಮತ್ತಿತರರಿಂದ ಮಾಧುಸ್ವಾಮಿ ಅವರ ರಾಜೀನಾಮೆ ಕೇಳಿಸುತ್ತಿದ್ದಾರೆ. ಸೋಮಶೇಖರ್ ನಮ್ಮಲ್ಲಿ ಅಂಥದ್ದೇನೂ ನಡೆದಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಸರ್ಕಾರ ಸರಿಯಾಗಿ ನಡೆಯುತ್ತಿದೆಯೇ? ಮೊದಲಿಗೆ ರಾಜ್ಯದಲ್ಲಿ ಸರ್ಕಾರ ಇದೆಯೇ ಎಂದು ಪ್ರಶ್ನಿಸಿದರು.

ಪ್ರವೀಣ್ ಹತ್ಯೆಯಾದಾಗ ಬಿಜೆಪಿ ಕಾರ್ಯಕರ್ತರೇ ಗಲಾಟೆ ಮಾಡಿದ್ದಾರೆ. ಬೊಮ್ಮಾಯಿ ವಿರುದ್ಧ ಆಕ್ರೋಶಗಳು ಕೇಳಿಬಂದಿವೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲï, ಸಚಿವ ಸುನೀಲ್ ಕುಮಾರ್ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು, ನಮಗೆ ರಕ್ಷಣೆ ಇಲ್ಲ ಎಂದು ದೂರಿದ್ದರು ಎಂದು ಹೇಳಿದರು.

ಇಷ್ಟೊಂದು ಭ್ರಷ್ಟಾಚಾರ ಹಿಂದೆಂದೂ ಇರಲಿಲ್ಲ. ಇಂದಿನ ಸಭೆಯಲ್ಲಿ ನಾವು ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಯುವಕರು, ಮಹಿಳೆಯರಿಗೆ ಈ ಸರ್ಕಾರದಲ್ಲಿ ನ್ಯಾಯ ಸಿಗುವುದಿಲ್ಲ. ರಾಜ್ಯದ ಜನ ಚುನಾವಣೆ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದಾರೆ. ಈ ಸರ್ಕಾರವನ್ನು ಕಿತ್ತುಹಾಕಲು ತಯಾರಿದ್ದಾರೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಮಹಮದ್ ಅವರು, ಮಾಧುಸ್ವಾಮಿ ಸಂಪುಟದ ಹಿರಿಯ ಸಚಿವರು. ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಜನಸಾಮಾನ್ಯರ ಜತೆ ದೂರವಾಣಿಯಲ್ಲಿ ಹಂಚಿಕೊಂಡಿದ್ದಾರೆ.

ಭ್ರಷ್ಟಾಚಾರದ ವಿರುದ್ಧ ಅಹಾಯಕತೆ ವ್ಯಕ್ತಪಡಿಸಿದ್ದಾರೆ. ಈ ಮೊದಲು ಈಶ್ವರಪ್ಪ ಅವರ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಕೇಳಿಬಂದಿತ್ತು. ಗುತ್ತಿದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣದ ತನಿಖೆ ನಡೆಯುವಾಗ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದೆವು ಎಂದರು.

ಆದರೆ ಹಿಂದೆಂದೂ ಇಲ್ಲದಷ್ಟು ವೇಗವಾಗಿ ತನಿಖೆ ನಡೆಸಿ ಈ ವರದಿ ಸಲ್ಲಿಸಲಾಗಿದೆ. ಈಗ ಸಚಿವ ಮಾಧುಸ್ವಾಮಿ ಅವರು, ಸಹಕಾರ ಇಲಾಖೆಯಲ್ಲಿ ನಡೆಯುತ್ತಿರುವ ಹಗರಣಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ಹೆಚ್ಚಾಗಿದೆ. ಕಾನೂನು ಸುವ್ಯವಸ್ಥೆ ಕುಸಿದಿದ್ದು ಯುವಕರ ಹತ್ಯೆಗಳಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೂರವಾಣಿಯಲ್ಲಿ ವಿವಾದಿತ ಹೇಳಿಕೆ ನೀಡಿದ ಮಾಧುಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಎಸ್.ಟ. ಸೋಮಶೇಖರ್ ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದರು.

ಇದೇ ವಿಷಯಕ್ಕೆ ಮಾತನಾಡಿದ ಮಾಜಿ ಸಚಿವ ಎಚ್.ಅಂಜನಯ್ಯ, ಬಿಜೆಪಿ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿತ್ತು. ನಾವು ಆಗಲೇ ಟೀಕೆ ಮಾಡಿದ್ದೇವು. ಭ್ರಷ್ಟಾಚಾರದ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಬಿಜೆಪಿಯ ಸಚಿವರೇ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ್ ಅವರು ಇದೇ ವಿಷಯ ಕುರಿತು ಮಾತನಾಡಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅವರು ವಾಗ್ದಾಳಿ ನಡೆಸಿದರು.

Articles You Might Like

Share This Article